ಕೇರಳ: ಎರಡು ಕಾರ್ಯಕ್ರಮಗಳಿಗೆ ಭಾಗವಹಿಸಲು 29 ಲಕ್ಷ ರೂಪಾಯಿ ಹಣವನ್ನು ತೆಗೆದುಕೊಂಡು ವಂಚನೆ ಮಾಡಿದ ಆರೋಪದ ಹಿನ್ನೆಲೆ ನಟಿ ಸನ್ನಿ ಲಿಯೋನ್ಳನ್ನು ಕೇರಳ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ನಾವು ಆಯೋಜಿಸಿದ್ದ ಎರಡು ಕಾರ್ಯಕ್ರಮಗಳಿಗೆ ಅತಿಥಿಯಾಗಿ ಬರುವುದಾಗಿ ಭರವಸೆ ನೀಡಿ ಸನ್ನಿ ಲಿಯೋನ್ ಅವರು 29 ಲಕ್ಷ ರೂಪಾಯಿಯನ್ನು ಪಡೆದಿದ್ದರು. ಆದರೆ, ಕಾರ್ಯಕ್ರಮಕ್ಕೆ ಬರದೇ ವಂಚನೆ ಮಾಡಿದ್ದಾರೆ ಎಂದು ಪೆರುಂಬವೋರ್ ನ ಆರ್. ಶಿಯಾಸ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಅಪರಾಧ ವಿಭಾಗದ ತಂಡ ಸನ್ನಿ ಲಿಯೋನ್ ಅವರ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ತಿರುವನಂತಪುರಂನ ಪೂವಾರ್ ಎನ್ನುವ ಸ್ಥಳಕ್ಕೆ ಹೋಗಿ ಹೇಳಿಕೆ ಪಡೆಯಲಾಗಿದೆ ಎನ್ನಲಾಗಿದೆ.
ಕೊರೋನಾ ಕಾರಣದಿಂದಾಗಿ ಐದು ಬಾರಿ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಸರಿಯಾದ ಸಮಯಕ್ಕೆ ಕಾರ್ಯಕ್ರಮ ನಡೆದಿಲ್ಲ. ಹೀಗಾಗಿಯೇ ನಾನು ಹೋಗಲು ಸಾಧ್ಯವಾಗಿಲ್ಲ ಎಂದು ಅಪರಾಧ ವಿಭಾಗದ ಪೊಲೀಸರಿಗೆ ನಟಿ ಸನ್ನಿ ಲಿಯೋನ್ ತಿಳಿಸಿದ್ದಾರೆ.