ಪಿಎಸ್ ಐ (psi) ಅಕ್ರಮ ನೇಮಕಾತಿ ಪ್ರಕರಣದಲ್ಲಿ ಬಂಧನವಾಗಿರೋ ನೇಮಕಾತಿ ವಿಭಾಗದ ಡಿಜಿಪಿಯಾಗಿದ್ದ ಅಮೃತ್ ಪಾಲ್ (Amrit Pal) ಅವರನ್ನ 10 ದಿನ ಸಿಐಡಿ (cid) ಕಸ್ಟಡಿಗೆ ನೀಡಲಾಗಿದೆ. 1ನೇ ಎಸಿಎಂಎಂ ಕೋರ್ಟ್ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅಮೃತ್ ಪಾಲ್ ಕಚೇರಿಯಲ್ಲಿ OMR ಶೀಟ್ ತಿದ್ದುಪಡಿ ಮಾಡಲಾಗಿತ್ತು.
ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿ ಪರೀಕ್ಷೆ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳ 93 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈಗಾಗಲೇ ನೇಮಕಾತಿ ವಿಭಾಗದ ಡಿವೈಎಸ್ ಪಿ ಶಾಂತಕುಮಾರ್, ಎಫ್ ಡಿ ಎ ಹರ್ಷಾ, ಸಿಬ್ಬಂದಿಗಳಾದ ಶ್ರೀಧರ್, ಶ್ರೀನಿವಾಸ್ ಬಂಧಿತರಾಗಿದ್ದರು. ಇದನ್ನೂ ಓದಿ : – PSI ಅಕ್ರಮ ನೇಮಕಾತಿ ಪ್ರಕರಣ – ಎಡಿಜಿಪಿ ಅಮೃತ್ ಪಾಲ್ ಬಂಧನ
ಪ್ರಕರಣ ಸಂಬಂಧ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಎಡಿಜಿಪಿ ಅಮೃತ್ ಪಾಲ್ ಅವರನ್ನು ನಾಲ್ಕನೇ ಬಾರಿಗೆ ಇಂದು ಸಿಐಡಿ ವಿಚಾರಣೆಗೆ ಕರೆದಿತ್ತು. ಡಿವೈಎಸ್ ಪಿ ಶಾಂತಕುಮಾರ್ ಬಂಧನಕ್ಕೂ ಮೊದಲೆ ಬಂಧಿತ ಎಡಿಜಿಪಿ ಅಮೃತ್ ಪೌಲ್ ಎತ್ತಂಗಡಿ ಮಾಡಲಾಗಿತ್ತು. ಪ್ರಕರಣ ಹೊರಬಂದು ಪಿಎಸ್ಐ ಅಕ್ರಮ ಕೇಸ್ ದಾಖಲಾಗ್ತಿದ್ದಂತೆ ISD ಅಂತರಿಕ ಭದ್ರತಾ ವಿಭಾಗಕ್ಕೆ ಅವರನ್ನು ಎತ್ತಂಗಡಿ ಮಾಡಲಾಗಿತ್ತು. ಅಮೃತ್‌ಪಾಲ್ ರಿಂದ ಸಿಐಡಿ ಹಿರಿಯ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದರು.
ಇದನ್ನೂ ಓದಿ : – ಸಿದ್ದರಾಮಯ್ಯಗೆ ಉಲ್ಟಾ ಮಚ್ಚೆ ಇದೆ- ಅದಕ್ಕೆ ಹೇಳಿದೆಲ್ಲ ಉಲ್ಟಾ ಆಗ್ತಿದೆ – ಸಿ.ಟಿ ರವಿ