ತಿರುವನಂತಪುರ: ಬೆಂಕಿ ಅವಘಡದ ಬಗ್ಗೆ ಮುನ್ನೆಚ್ಚರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಕೋಝಿಕ್ಕೋಡ್ನಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಸರಕು ವಿಮಾನ ತುರ್ತು ಲ್ಯಾಂಡಿಂಗ್ ಮಾಡಿದೆ. ಕಲ್ಲೀಕೋಟೆಯಿಂದ ಕುವೈತ್ಗೆ ವಿಮಾನ ತೆರಳುತ್ತಿತ್ತು. ಕೋಝಿಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ವಿಮಾನದ ಕಾರ್ಗೋ ಬೋಗಿಯಲ್ಲಿ ಬೆಂಕಿ ಅವಘಡದ ಸೂಚನೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯ ಕಾರಣದಿಂದ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ ಎಂದು ಏರ್ ಇಂಡಿಯಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಮಾನದಲ್ಲಿ ಐವರು ಸಿಬ್ಬಂದಿ ಮತ್ತು 17ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.