ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಈ ಬಗ್ಗೆ ಅಕ್ಷಯ್ ಕುಮಾರ್ ಟ್ವಿಟರ್ ಮತ್ತು ಇನ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿದ್ದಾರೆ.
ನನಗೆ ಕೊರೋನಾ ಸೋಂಕು ತಗುಲಿದೆ. ಸದ್ಯ ನಾನು ಹೋಮ್ ಐಸೋಲೇಶನ್ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಮದ ಎಲ್ಲರೂ ನಿಗಾ ವಹಿಸಿ, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ. ಶೀಘ್ರದಲ್ಲಿಯೇ ಗುಣಮುಖನಾಗುವ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ. ಅಕ್ಷಯ್ ಕುಮಾರ್ ಅವರ ಪೋಸ್ಟ್ಗೆ ಅಭಿಮಾನಿಗಳು ಬೇಗ ಗುಣಮುಖರಾಗಿ ಎಂದು ಹಾರೈಸಿ ಕಮೆಂಟ್ಗಳನ್ನು ಮಾಡಿದ್ದಾರೆ.
ಇತ್ತೀಚಿಗಷ್ಟೇ ಅಕ್ಷಯ್ ಕುಮಾರ್ ಬಹುನಿರೀಕ್ಷಿತ ರಾಮಸೇತು ಚಿತ್ರದ ಫಸ್ಟ್ ಲುಕ್ನ್ನು ಹಂಚಿಕೊಂಡಿದ್ದರು. ರಾಮಸೇತು ವಿಶೇಷ ಚಿತ್ರವಾಗಿದೆ. ಈ ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆ ಹೇಗಿರಲಿದೆ ಎಂಬುದರ ಬಗ್ಗೆ ಕಾಯುತ್ತಿದ್ದೇನೆ ಎಂದು ಅಕ್ಷಯ್ ಕುಮಾರ್ ಹೇಳಿದ್ದರು. ಈ ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ನುಸ್ರಾತ್ ಭರುಚ್ಚಾ ನಟಿಸುತ್ತಿದ್ದಾರೆ.