ಶನಿವಾರ ಒಡಿಶಾದ ಎಲ್ಲಾ 20 ಸಚಿವರು ರಾಜೀನಾಮೆ ನೀಡಿದ್ದರು. ಇದಾದ ಒಂದು ದಿನದ ಬಳಿಕ ಹೊಸ ಸಂಪುಟ ಪುನಾರಚನೆ ಆಗಿದ್ದು, ನೂತನ 13 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ನಿರ್ದೇಶನದಂತೆ ರಾಜ್ಯ ಸರ್ಕಾರದ ಎಲ್ಲಾ 20 ಸಚಿವರು ಶನಿವಾರ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು.
ಒಡಿಶಾದ ರಾಜಕೀ ಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ಸಚಿವರು ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ಭುವನೇಶ್ವರದ ಲೋಕಸೇವಾ ಭವನದ ನೂತನ ಸಮಾವೇಶ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಡಿ ಶಾಸಕರಾದ ಜಗನ್ನಾಥ್ ಸರಕಾ, ನಿರಂಜನ್ ಪೂಜಾರಿ ಮತ್ತು ಆರ್.ಪಿ ಸ್ವೈನ್ ಸೇರಿದಂತೆ 13 ಶಾಸಕರಿಗೆ ರಾಜ್ಯಪಾಲ ಗಣೇಶಿ ಲಾಲ್ ಅವರು ಪ್ರಮಾಣ ವಚನ ಬೋಧಿಸಿದರು. ಮೂವರು ಮಹಿಳಾ ಶಾಸಕರಾದ ಪ್ರಮೀಳಾ ಮಲ್ಲಿಕ್, ಉಷಾದೇವಿ ಮತ್ತು ತುಕುನಿ ಸಾಹು ಅವರನ್ನು ನೂತನ ಸಚಿವ ಸಂಪುಟಕ್ಕೆ ಸೇರಿಸಲಾಗಿದೆ.
ಇದನ್ನೂ ಓದಿ : – ₹2000 ನೋಟುಗಳ ಸಂಖ್ಯೆ ಭಾರೀ ಇಳಿಕೆ! ಕುತೂಹಲ ಕೆರಳಿಸಿದ ಮೋದಿ ನಡೆ..!