ಪಕ್ಷದಲ್ಲಿ ನನ್ನನ್ನು ಕಡೆಗಣಿಸಿದರೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಹೇಳುವ ಮೂಲಕ ರಾಜೀನಾಮೆ ನೀಡುವ ಮುನ್ಸೂಚನೆ ನೀಡಿದ್ದಾರೆ.
ಶನಿವಾರ ನಡೆದ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿರುವ ಅಮರಿಂದರ್ ಸಿಂಗ್ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮುಂದಿನ ಚುನಾವಣೆಯನ್ನು ಅಮರಿಂದರ್ ಸಿಂಗ್ ನೇತೃತ್ವದಲ್ಲಿ ಹೋದರೆ ಹಿನ್ನಡೆ ಆಗಲಿದೆ ಎಂಬ ವರದಿ ಬಂದಿರುವುದು ಪಕ್ಷಕ್ಕೆ ಆಘಾತ ತಂದಿದೆ.
ಅಮರಿಂದರ್ ಸಿಂಗ್ ಶಾಸಕಾಂಗ ಪಕ್ಷದ ಸಭೆಯ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಹೈಕಮಾಂಡ್ ಕೂಡ ನೂತನ ಸಿಎಂ ಅಭ್ಯರ್ಥಿ ಆಯ್ಕೆಗೆ ಸಿದ್ಧತೆ ಆರಂಭಿಸಿದೆ ಎಂದು ಹೇಳಲಾಗಿದೆ.
ಇತ್ತೀಚೆಗಷ್ಟೇ ಬಿಜೆಪಿ ಕೂಡ ಚುನಾವಣಾ ಪೂರ್ವ ಸಮೀಕ್ಷೆ ಆಧರಿಸಿ ಉತ್ತರಾಖಂಡ್, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಖ್ಯಮಂತ್ರಿಗಳನ್ನು ಬದಲಿಸಿತ್ತು.