ಚುನಾವಣೆಎ 6 ತಿಂಗಳು ಬಾಕಿ ಇರುವಾಗಲೇ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ.
ಶನಿವಾರ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದ ಅಮರಿಂದರ್ ಸಿಂಗ್ ನಡೆದ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ರಾಜ್ಯಪಾಲ ಬನ್ವರಿಲಾಲ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.
ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮುಂದಿನ ಚುನಾವಣೆಯನ್ನು ಅಮರಿಂದರ್ ಸಿಂಗ್ ನೇತೃತ್ವದಲ್ಲಿ ಹೋದರೆ ಹಿನ್ನಡೆ ಆಗಲಿದೆ ಎಂಬ ವರದಿ ಬಂದಿರುವುದು ಪಕ್ಷಕ್ಕೆ ಆಘಾತ ತಂದಿತ್ತು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಅಮರಿಂದರ್ ಸಿಂಗ್ ಅವರ ರಾಜೀನಾಮೆಗೆ ಸೂಚಿಸಿತ್ತು.
ಶನಿವಾರ ಸಂಜೆ 5 ಗಂಟೆ ನಂತರ ನಡೆಯಲಿರುವ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇತ್ತೀಚೆಗಷ್ಟೇ ಬಿಜೆಪಿ ಕೂಡ ಚುನಾವಣಾ ಪೂರ್ವ ಸಮೀಕ್ಷೆ ಆಧರಿಸಿ ಉತ್ತರಾಖಂಡ್, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಖ್ಯಮಂತ್ರಿಗಳನ್ನು ಬದಲಿಸಿತ್ತು.