ಪಂಜಾಬ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ನಂತರ ಅಸಮಾಧಾನಗೊಂಡಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಗೆ ಸೇರುವ ಸಾಧ್ಯತೆ ಇದೆ.
ಅಮರಿಂದರ್ ಸಿಂಗ್ ಇಂದು ಬಿಜೆಪಿ ಮುಖಂಡರಾದ ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದು, ಬಿಜೆಪಿ ಸೇರ್ಪಡೆ ಕುರಿತು ಚರ್ಚೆಯ ನಂತರ ಅಧಿಕೃತವಾಗಿ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.
ಪಂಜಾಬ್ ವಿಧಾನಸಭಾ ಚುನಾವಣೆಗೆ 5 ತಿಂಗಳು ಮಾತ್ರ ಬಾಕಿ ಇದ್ದು, ರಾಜ್ಯ ಕಾಂಗ್ರೆಸ್ ನಲ್ಲಿ ನವಜ್ಯೋತ್ ಸಿಂಗ್ ಸಿದ್ದು ಮೇಲುಗೈ ಸಾಧಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸುವ ಉದ್ದೇಶದಿಂದ ಅಮರಿಂದರ್ ಬಿಜೆಪಿಗೆ ಸೇರಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.