ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amith sha) ಹೇಳಿಕೆಯನ್ನು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ(Siddaramiah) ಖಂಡಿಸಿದ್ದಾರೆ.
ಈ ಕುರಿತಾಗಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು ಹಿಂದಿ ಭಾಷೆ ಬಳಸುವಂತೆ ಅಮಿತ್ ಶಾ ಫರ್ಮಾನು ಹೊರಡಿಸಿರುವುದು ಅತ್ಯಂತ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ ಕನ್ನಡಿಗನಾಗಿ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದಿದ್ದಾರೆ. ಅಮಿತ್ ಶಾ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಮಾತೃಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ. ಇದನ್ನು ಓದಿ :-ಪ್ರಧಾನಿ ಮೋದಿ ಹತ್ಯೆಗೆ ಸಂಚು – ಎನ್ ಐಎಗೆ ಇ – ಮೇಲ್ ಬೆದರಿಕೆ
ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂದೆಗೆದುಕೊಳ್ಳಬೇಕು. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ. ಇದನ್ನು ಓದಿ :- Siddaramiah – ಬಾದಾಮಿ ಜನರಿಗೆ ಅಡ್ಡಗೋಡೆ ಮೇಲೆ ದೀಪ ಇಟ್ಟ ಸಿದ್ದರಾಮಯ್ಯ
ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ ಮಗನಾದ ಮಹಾತ್ಮ ಗಾಂಧೀಜಿ (Gandhiji) ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ (Savarkar) ಪ್ರಿಯರಾಗಿರುವುದು ದುರಂತ ಎಂದು ಜರಿದಿದ್ದಾರೆ.
ಗುಜರಾತಿನಿಂದ ಬಂದಿರುವ ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ ಮಾಡುತ್ತಿರುವುದು ವಿಷಾದನೀಯ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಇದನ್ನು ಓದಿ :-ಕರ್ನಾಟಕದ ಸಹಕಾರ ವಲಯ ಕೊಂಡಾಡಿದ ಅಮಿತ್ ಶಾ