ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿರುವ ಆನಂದ್ ಸಿಂಗ್ ಇನ್ನೆರಡು ದಿನದಲ್ಲಿ ರಾಜಕೀಯ ನಿಲುವು ಪ್ರಕಟಿಸುವ ಸಾಧ್ಯತೆ ಇದೆ.
ಇಂಧನ ಅಥವಾ ಬೃಹತ್ ಕೈಗಾರಿಕೆ ಖಾತೆಗೆ ಪಟ್ಟು ಹಿಡಿದ ಅನಂದ್ ಸಿಂಗ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಮಾತುಕತೆ ವೇಳೆ ಯಾವುದೇ ಭರವಸೆ ದೊರೆಯದ ಹಿನ್ನೆಲೆಯಲ್ಲಿ ಮನೆಯಲ್ಲೇ ತಂಗಿದ್ದು, ಇನ್ನೆರಡು ದಿನದಲ್ಲಿ ರಾಜಕೀಯ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಇನ್ನೆರೆಡು ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೆನೆ ಎಂದು ಆನಂದ್ ಸಿಂಗ್ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದು, ಸಿಎಂರಿಂದ ಎರಡು ದಿನದಲ್ಲಿ ಖಚಿತ ಭರವಸೆ ದೊರೆಯದಿದ್ದರೆ ರಾಜೀನಾಮೆಯಂತಹ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.