ಕೊಪ್ಪಳ (Koppala) ದ ಗಂಗಾವತಿ ತಾಲೂಕಿನ ಆನೆಗೊಂದಿ ಅಂಜನಾದ್ರಿ ಬೆಟ್ಟ (Anjanadri hill) ದಲ್ಲಿ ಹಿಂದೂಗಳನ್ನು ಹೊರತುಪಡಿಸಿ ವ್ಯಾಪಾರ ವಹಿವಾಟು ನಡೆಸದಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಾಣ ವೇದಿಕೆಯಿಂದ ಮನವಿ ಮಾಡಲಾಗಿದೆ. ಹನುಮನ ಜನ್ಮಸ್ಥಳ ಎಂದೇ ಅಂಜನಾದ್ರಿ ಬೆಟ್ಟ ಖ್ಯಾತಿ ಪಡೆದಿದೆ.
ಡಿಸೆಂಬರ್ 5 ರಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಹಿಂದೂ (Hindu)ಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಎಂದು ಹಿಂದೂ ಜಾಗರಾಣ ವೇದಿಕೆ ಜಿಲ್ಲಾ ಸಂಚಾಲಕ ಸಂಜೀವ ಮನವಿ ಮಾಡಿದ್ದಾರೆ. ಮುಸ್ಲಿಂ, ಕ್ರಿಶ್ಚಿಯನ್, ವ್ಯಾಪಾರ ನಿಷೇಧ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವ್ಯಾಪಾರ ವಹಿವಾಟು ಹೆಸರಿನಲ್ಲಿ ಮುಸ್ಲಿಂ ಉಗ್ರರು ಹಿಂದೂ ಧಾರ್ಮಿಕ ಸ್ಥಳಗಳ ಮಾಹಿತಿ ಕಲೆ ಹಾಕಲಾಗುತ್ತೆ ಎಂದು ಪತ್ರದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮನವಿ ಮಾಡಲಾಗಿದೆ.
ಇದನ್ನೂ ಓದಿ : – ಚೀನಾದಲ್ಲಿ ಕೋವಿಡ್ ಹೆಚ್ಚಳ – ಭುಗಿಲೆದ್ದ ಪ್ರತಿಭಟನೆ