ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ- ಸಿಎಂ ಬೊಮ್ಮಾಯಿ

ಕೊಪ್ಪಳ( kopala ) ದ ಅಂಜನಾದ್ರಿಯೇ ಹನುಮನ ಜನ್ಮ ಸ್ಥಳ. ಇದನ್ನು ಸಾವಿರ ಸಾವಿರ ಸಾರಿ ಒತ್ತಿ ಹೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ( basavaraj bommai ) ತಿಳಿಸಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಮ್ಮೆಲ್ಲರ ಆರಾದ್ಯ ದೈವ ಅಂಜನಾದ್ರಿಯ ಹನುಮಂತನ ದರ್ಶನಕ್ಕೆ ಆಗಮಿಸಿದ್ದೇವೆ. ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ಈಗಾಗಲೆ ಬಜೆಟ್ ನಲ್ಲಿ 100 ಕೋಟಿ ರೂಪಾಯಿ ಅನುದಾನ‌ ಘೋಷಣೆ ಮಾಡಿದ್ದೇನೆ.  ಇದನ್ನು ಓದಿ :- ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ –ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳ ಬಂಧನ

ಅಂಜನಾದ್ರಿಗೆ ಪ್ರತಿವರ್ಷವೂ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸುವುದು ನಮ್ಮ‌ಕರ್ತವ್ಯ. ಮುಂರುವ ದಿನಗಳಲ್ಲಿ ಯಾತ್ರಿಗಳು ಆಗಮಿಸುವ ಸಂಖ್ಯೆ ಹೆಚ್ಚಳವಾಗಲಿದೆ. ಹೀಗಾಗಿ ಅಂಜನಾದ್ರಿ ಬೆಟ್ಟದ ಮೇಲೂ ಮತ್ತು ಕೆಳಗೂ ಅಭಿವೃದ್ಧಿ ಆಗಬೇಕಾದ ಅಗತ್ಯವಿದೆ ಎಂದು ಹೇಳಿದ್ರು.

ಇಲ್ಲಿ ಯಾತ್ರಿಕರಿಗೆ ಆಸ್ಪತ್ರೆ, ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಚಿಂತನೆಯಾಗಿದೆ. ಬೆಟ್ಟಕ್ಕೆ ರೋಪ್ ವೆ ವ್ಯವಸ್ಥೆ ಮಾಡಿ ವಯಸ್ಸಾದವರಿವೂ ಸಹ ಹನುಮಂತನ ದೇರ್ಶನ ಕಲ್ಪಿಸುವ ಚಿಂತನೆ ಇದೆ ಬಜೆಟ್ ನಲ್ಲಿ ಜಿಲ್ಲೆಗೆ ನೀಡಿದ ಅನುದಾನದ ಕಾಮಗಾರಿಗಳಿಗೆ ಚಾಲನೆ ಕೊಡಲು ಬಂದಿದ್ದೇನೆ ಎಂದು ಹೇಳಿದ್ರು.

 ಇದನ್ನು ಓದಿ :- ಭೂಕಬಳಿಕೆ ಆರೋಪ ಹಿನ್ನೆಲೆ – ಸಚಿವ ಶ್ರೀರಾಮುಲು ರಾಜೀನಾಮೆಗೆ ಎಸ್.ಆರ್.ಹೀರೆಮಠ್ ಆಗ್ರಹ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!