ಚುನಾವಣೆ ಹೊಸ್ತಿಲಲ್ಲೇ ಕೆಆರ್ ಪಿಪಿ (KRPP)ಸಂಸ್ಥಾಪಕ ಜನಾರ್ದನ ರೆಡ್ಡಿ ದರ್ಗಾಕ್ಕೆ ಭೇಟಿ ನೀಡಿದ್ದು, ಕಾಂಗ್ರೆಸ್ ಪಾಳೆಯದಲ್ಲಿ ಆತಂಕ ಸೃಷ್ಠಿಸಿದ್ದಾರೆ.
ಮುಸ್ಲಿಂ ಮತ ಬೇಟೆಗೆ ರೆಡ್ಡಿ ಮತ್ತೊಂದು ದಾಳ ಉರುಳಿಸಿದ್ರಾ ಎಂಬ ಪ್ರಶ್ನೆ ಮೂಡಿದ್ದು, ರೆಡ್ಡಿ ನಡೆಯಿಂದ ಕಾಂಗ್ರೆಸ್ ಪಾಳಯದಲ್ಲೂ ಸಂಚಲನ ಮೂಡಿಸಿದೆ. ಜನಾರ್ದನ ರೆಡ್ಡಿ ಪತ್ನಿ ಸಮೇತ ರಾಜಸ್ಥಾನದ ಅಜ್ಮೇರ್ ದರ್ಗಾಕ್ಕೆ ಭೇಟಿ ನೀಡಿದ್ದಾರೆ. ಅಜ್ಮೇರ್ ನಲ್ಲಿನ ಖಾಜಾ ಗರೀಬ್ ನವಾಜ್ ದರ್ಗಾಕ್ಕೆ ತೆರಳಿ ಚಾದರ ಮತ್ತು ಹೂ ಸಮರ್ಪಣೆ ಮಾಡಿ, ವಿವಿಧ ಧಾರ್ಮಿಕ ವಿಧಿ-ವಿಧಾನ ಪೂರೈಸಿದ್ದಾರೆ. ಇದನ್ನು ಓದಿ :- ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ – ಇಂದು ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್
ವಿಶೇಷ ಪೂಜೆ ಸಲ್ಲಿಸಿರೋ ಜನಾರ್ದನ ರೆಡ್ಡಿ ಹಾಗೂ ಪತ್ನಿ ಲಕ್ಷ್ಮೀ ಅರುಣಾ, ನಾಡಿನ ಜನರ ನೆಮ್ಮದಿಯ ಜೀವನಕ್ಕಾಗಿ ಪ್ರಾರ್ಥಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಿರ್ಧರಿಸಿರುವ ಜನಾರ್ದನ ರೆಡ್ಡಿ, ಪತ್ನಿ ಲಕ್ಷ್ಮೀ ಅರುಣಾರನ್ನು ಬಳ್ಳಾರಿ ಅಥವಾ ಸಿಂಧನೂರು ಕ್ಷೇತ್ರದಿಂದ ಸ್ಪರ್ಧೆಗೆ ಇಳಿಸುವ ಸಾಧ್ಯತೆ ಇದೆ.
ಇದನ್ನು ಓದಿ :- ಕೋಲಾರದಲ್ಲಿ ಸಿದ್ದರಾಮಯ್ಯಗೆ ಕೊನೆಗೂ ಸಿಕ್ತು ಮನೆ…!