ಬೆಂಗಳೂರಿನಲ್ಲಿ ಬಿಬಿಎಂಪಿ ಯಮ ಸ್ವರೂಪಿ ಕಸದ ಲಾರಿಗೆ ಮತ್ತೊಂದು ಬಲಿ

ಬಿಬಿಎಂಪಿ (BBMP) ಯಮ ಸ್ವರೂಪಿ ಕಸದ ಲಾರಿ (Garbage truck) ಗೆ ಇಂದು ಮತ್ತೊಂದು ಜೀವ ಬಲಿಯಾಗಿದೆ. ಮುಂದೆ ಚಲಿಸುತ್ತಿದ್ದ ಬೈಕ್ ಗೆ ಹಿಂದಿನಿಂದ ವೇಗವಾಗಿ ಬಂದು ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.ವಿಜಯ ಕಲಾ ಅಪಘಾತದಲ್ಲಿ ಮೃತಪಟ್ಟ ಮಹಿಳೆ.

ನಾಗರಭಾವಿ (Nagarbhavi) ರಿಂಗ್ ರಸ್ತೆ (Ring road) ಯಲ್ಲಿ ಬೆಳಗ್ಗೆ 9:50ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಬೈಕ್ ಚಲಾಯಿಸುತ್ತಿದ್ದ ವಿಜಯ ಕಲಾ ಅವರ ಪತಿ ಯೋಗೇಂದ್ರ ಗಂಭೀರವಾಗಿ ಗಾಯಗೊಂಡಿದ್ದಾರೆ.ಯೋಗೇಂದ್ರ (Yogendra) ಅವರು ಪತ್ನಿ ವಿಜಯ ಕಲಾ (Vijaya kala) ಜೊತೆ ಬೈಕ್ನಲ್ಲಿ ಹೋಗುತ್ತಿದ್ದಾಗ, ಹಿಂದೆಯಿಂದ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ವಿಜಯ ಕಲಾ ಮೃತಪಟ್ಟಿದ್ದಾರೆ. ಅವರ ಪತಿ ಯೋಗೇಂದ್ರ ಸ್ಥಿತಿ ಗಂಭೀರವಾಗಿದೆ. ಘಟನೆ ಸಂಬಂಧ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ : –  ಲಂಕಾ ಅಧ್ಯಕ್ಷರ ಮನೆಯಲ್ಲಿ ಪ್ರತಿಭಟನಾಕಾರರಿಗೆ ಸಿಕ್ತು ಲಕ್ಷ ಲಕ್ಷ ಹಣ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!