ರೋಹಿತ್ ಚಕ್ರ ತೀರ್ಥ ಸಮಿತಿಯಿಂದ ಮತ್ತೊಂದು ಯಡವಟ್ಟು – ಎರಡೂ ತರಗತಿಗಳಿಗೆ ಒಂದೇ ಪದ್ಯ

ಪಠ್ಯಪುಸ್ತಕ ಪರಿಶೀಲನಾ ಸಮಿತಿಯಿಂದ ಮತ್ತೊಂದು ಯಡವಟ್ಟು ನಡೆದಿದೆ. 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿ ಒಂದೇ ಪದ್ಯವನ್ನು ಸೇರ್ಪಡೆಗೊಳಿಸಲಾಗಿದೆ.

ಈ ಮೂಲಕ ದಿನಕ್ಕೊಂದು ಯಡವಟ್ಟು ಬಹಿರಂಗವಾಗುತ್ತಿವೆ. ಬಿ.ಎಂ ಶರ್ಮಾರವರ “ಬಾವಿಯ ಚಂದ್ರ’ ಎಂಬ ಪದ್ಯವನ್ನು ಎರಡು ತರಗತಿಗಳಲ್ಲಿ ಸೇರಿಸಿ ಸಮಿತಿ ಯಡವಟ್ಟು ಮಾಡಿದೆ. ಬಾವಿಯಲ್ಲಿ ಚಂದ್ರ ಶೀರ್ಷಿಕೆಯ ಪದ್ಯವನ್ನು ಹಿಂದಿನ ಸಮಿತಿಯು 3ನೇ ತರಗತಿ ನಲಿ-ಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ಇದನ್ನೂ ಓದಿ :-  ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜನೆ – ಸಿಎಂ ಬೊಮ್ಮಾಯಿ ಸ್ಪಷ್ಟನೆ

ರೋಹಿತ್ ಚಕ್ರತೀರ್ಥ ಸಮಿತಿಯು 3ನೇ ತರಗತಿಯ ನಲಿಕಲಿ ಕನ್ನಡ ಪಠ್ಯದಲ್ಲಿ ಮುಂದುವರೆಸಿದೆ. ಅಲ್ಲದೆ 4ನೇ ತರಗತಿಯ 7 ಕನ್ನಡ ಪುಸ್ತಕದಲ್ಲಿಯೂ ಇದೇ ಪದ್ಯ ಸೇರಿಸಲಾಗಿದ್ದು, ಪಾಠ ಮಾಡುವ ಶಿಕ್ಷಕರಿಗೂ ಗೊಂದಲ ಉಂಟಾಗಿದೆ ಎನ್ನಲಾಗಿದೆ.

ಇದನ್ನೂ ಓದಿ :- ವಿವಾದದ ಬಳಿಕ ಎಚ್ಚೆತ್ತುಕೊಳ್ಳದ ಸರ್ಕಾರ – ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಿಯುಸಿ ಪಠ್ಯ ಪರಿಷ್ಕರಣೆ!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!