ಹುಬ್ಬಳ್ಳಿ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೊಂಕು ಹೆಚ್ಚಾಗಿ ಹರಡುತ್ತಿದೆ. ಇದರ ಕಾರಣ ತಿಳಿಯಲು ಸರ್ಕಾರದಿಂದ ಮೈಕೋಲಾಜಿಸ್ಟ್ (ಶಿಲೀಂದ್ರ ತಜ್ಞರ) ಸಮಿತಿ ನೇಮಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಹುಬ್ಬಳ್ಳಿ ಕಿಮ್ಸ್ಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು ತಜ್ಞರ ಸಮಿತಿ ಪ್ರಾಥಮಿಕ ವರದಿಯನ್ನು ನೀಡಿದೆ.
ಕ್ಯಾನುಲಾಗಳು ಸೇರಿದಂತೆ ಐಸಿಯುನಲ್ಲಿ ಬಳಸುವ ವೈದ್ಯಕೀಯ ಪರಿಕರಗಳಲ್ಲಿ ಕೂಡ ಫಂಗಸ್ ಬೆಳೆಯತ್ತಿದೆ. ಇವುಗಳನ್ನು ಮತ್ತೊಬ್ಬ ರೋಗಿ ಬಳಸುವಾಗ ಸಂಪೂರ್ಣವಾಗಿ ಸ್ಯಾನಿಟೈನ್ ಮಾಡಿ ಬಳಸಬೇಕು. ಇಲ್ಲವಾದರೆ ಹೊಸದನ್ನು ಬಳಸಬೇಕು ಎಂಬ ಸಲಹೆಯನ್ನು ತಜ್ಞರ ಸಮಿತಿ ನೀಡಿದೆ. ತಜ್ಞರ ವರದಿ ಆಧರಿಸಿ ಬ್ಲ್ಯಾಕ್ ಫಂಗಸ್ ಸೊಂಕು ಹರಡುವುದನ್ನು ತಡೆಯಲು ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಬ್ಲ್ಯಾಕ್ ಹಾಗೂ ವೈಟ್ ಫಂಗಸ್‌ನಲ್ಲಿ ವರ್ಣದ ಅಂಶ ಹೊರತು ಪಡಸಿದರೆ ಬೇರೆ ವ್ಯತ್ಯಾಸಗಳು ಇಲ್ಲ. ಸ್ಟಿರಾಯ್ಡ್‌ನ ವಿವೇಚನ ರಹಿತ ಬಳಕೆ ದೇಹದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುವಂತೆ ಮಾಡುತ್ತದೆ. ಐಸಿಯುನಲ್ಲಿ ಆಮ್ಲಜನಕದ ಮೇಲೆ ರೋಗಿಗಳು ಹೆಚ್ಚುಕಾಲ ಇರುವುದರಿಂದ ಅವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಫಂಗಸ್ ಸೋಂಕು ಇವರನ್ನು ತೀವ್ರತರನಾಗಿ ಬಾದಿಸತ್ತಿದೆ. ದೇಶದಲ್ಲಿ 40 ರಿಂದ 50 ಬ್ಲ್ಯಾಕ್ ಪಂಗಸ್ ಪ್ರಕರಣಗಳು ಬೆಳಕಿಗೆ ಬರುತ್ತಿದ್ದವು. ಆದರೆ ಇಂದು ಹಲವು ರಾಜ್ಯಗಳಲ್ಲಿ ಸೊಂಕು ಹೆಚ್ಚಾಗಿ ಹರಡುತ್ತಿದೆ ಎಂದರು.
ಪ್ರಸ್ತುತ ಮಾಹಿತಿ ಪ್ರಕಾರ ರಾಜ್ಯದಲ್ಲಿ 250 ಬ್ಲಾಕ್ ಫಂಗಸ್ ಸೋಂಕಿತರು ಇದ್ದಾರೆ. ಎಲ್ಲಾ ಸೊಂಕಿತರಿಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ದೇಶದಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯವಾದ ಔಷಧಗಳ 14 ಸಾವಿರ ವೈಲ್ಸ್ ಉತ್ಪಾದನೆಯಾಗುತ್ತಿದೆ. ರಾಜ್ಯಕ್ಕೆ ಅಗತ್ಯವಿರುವಷ್ಟು ವೈಲ್‌ಗಳನ್ನು ಒದಗಿಸುವುದಾಗಿ ಕೇಂದ್ರ ಸಚಿವ ಸದಾನಂದಗೌಡ ಅವರು ಆಶ್ವಾಸನೆ ನೀಡಿದ್ದಾರೆ ಎಂದು ತಿಳಿಸಿದರು.