ಕೊನೆಗೂ ಚಿತ್ರದುರ್ಗ ( chithra durga ) ದ ಮುರುಘಾ ಮಠಕ್ಕೆ ಪ್ರಭಾರ ಪೀಠಾಧ್ಯಕ್ಷರ ನೇಮಕವಾಗಿದೆ. ಹಲವರ ವಿರೋಧದ ನಡುವೆಯೂ ಕಾನೂನು ಪ್ರಕ್ರಿಯೆ ಮೂಲಕ ಅಧಿಕೃತವಾಗಿ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಹೈ ಕೋರ್ಟ್ ( high court ) ಅನುಮತಿ ಪಡೆದು ಬಸವಪ್ರಭುಶ್ರೀ ನೇಮಕ ಕುರಿತು ಮುರುಘಾಮಠ ಇಂದುಅಧಿಕೃತ ಪ್ರಕಟಣೆ ಹೊರಡಿಸಿದೆ.
ಸದ್ಯದ ಪರಿಸ್ಥಿತಿಯಲ್ಲಿ ಧಾರ್ಮಿಕ, ಸೇವಾ, ಪೂಜಾ ಕಾರ್ಯಗಳು ಮಠದ ಪರಂಪರೆ ಮುಂದುವರೆಸಿಕೊಂಡು ಹೋಗಲು ಪ್ರಕಟಣೆಯಲ್ಲಿ ತಿಳಿಸಿದೆ. ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿಯಾಗಿ ನೇಮಕಗೊಂಡಿರುವ ಬಸವಪ್ರಭು ಶ್ರೀ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಪೂಜೆ, ದಾಸೋಹ, ಮಠದ ಕೆಲಸ ನೋಡಿಕೊಳ್ಳಲು ಶಿವಮೂರ್ತಿ ಮುರುಘಾ ( shivamurthy muruga ) ಶರಣರಿಂದ ಆದೇಶ ಸಿಕ್ಕಿದೆ. ನಿಷ್ಠೆಯಿಂದ ಭಕ್ತಿಯಿಂದ ಸೇವಾಕಾರ್ಯ ಮಾಡುತ್ತೇನೆ. ಮುರುಘೇಶ, ಗುರು ಬಸವೇಶನ ಸೇವೆ ಮಾಡುತ್ತೇನೆ ಎಂದು ಹೇಳಿದರು. ಮುರುಘಾಶ್ರೀ ಆಶೀರ್ವಾದ, ಮಾರ್ಗದರ್ಶನದಲ್ಲಿ ಎಲ್ಲಾ ಮಠದ ಶ್ರೀಗಳು, ಎಲ್ಲಾ ಭಕ್ತರ ಆಶಯದಂತೆ ಸೇವೆ ಮಾಡುತ್ತೇನೆ. ಭಕ್ತರು ಎಂದಿನಂತೆ ಸಹಕರಿಸವೇಕೆಂದು ಮನವಿ ಮಾಡಿದರು. ತಾತ್ಕಾಲಿಕ ಆದೇಶ, ಮುಂದಿನ ಆದೇಶದವರೆಗೆ ಬಸವಣ್ಣನ ಆಶೀರ್ವಾದ , ಗುರುವಿನ ಆಶೀರ್ವಾದ, ಮುರುಘಾಶ್ರೀ ಆಶೀರ್ವಾದ ಶಕ್ತಿಯಿಂದ ಜವಬ್ದಾರಿ ನಿರ್ವಹಿಸುತ್ತೇನೆ ಎಂದು ಹೇಳಿದ್ರು.
ಇದನ್ನೂ ಓದಿ :- ಎಲ್ಲರು ನನಗೆ ಬೆಂಬಲಿಸಿ ನಾನು ಕೆಳಮಟ್ಟದ ದಿಂದ ಬಂದವನು – ಮಲ್ಲಿಕಾರ್ಜುನ ಖರ್ಗೆ