ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವ ಮಸೂದೆಯನ್ನು ತಮಿಳುನಾಡು ವಿಧಾನಸಭೆ ಸೋಮವಾರ ಅಂಗೀಕರಿಸಿದೆ. ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಿದೆ.
ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ತಮಿಳುನಾಡು ವಿಶ್ವವಿದ್ಯಾಲಯಗಳ ಕಾನೂನುಗಳಿಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಮಂಡಿಸಿದರು.
ಮಸೂದೆಯಲ್ಲಿ ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳನ್ನು ನೇಮಕ ಮಾಡಲು ಅವಕಾಶ ಮಾಡಿಕೊಟ್ಟಿದೆ.
ಇದಕ್ಕೂ ಮುನ್ನ, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಸರ್ಕಾರದ ನಿರ್ಧಾರವನ್ನು ಬೆಂಬಲಿಸುವಂತೆ ಸದನO ಸದಸ್ಯರಲ್ಲಿ ಮನವಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿಯೂ ಸಹ ಉಪಕುಲಪತಿಗಳನ್ನು ರಾಜ್ಯಪಾಲರು ನೇಮಿಸದೆ ರಾಜ್ಯ ಸರ್ಕಾರ ನೇಮಿಸುತ್ತಿದೆ ಎಂದು ಹೇಳಿದ್ರು.
ಇದನ್ನೂ ಓದಿ :- ಚಿನ್ನ ಬೆಳ್ಳಿ ವ್ಯಾಪಾರಸ್ಥರಲ್ಲಿ ಮುಸಲ್ಮಾನರೇ ಹೆಚ್ಚಿನವರಿದ್ದಾರೆ – ಹೆಚ್.ಡಿ.ಕೆ