ಭಾರತೀಯ ಸೇನಾ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಅಗ್ನಿಪಥ ಯೋಜನೆಗೆ ಕೇಂದ್ರ ಸಂಪುಟ ಸಮಿತಿ ಅನುಮೋದನೆ ನೀಡಿದೆ. ಈ ಕುರಿತಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದು, ‘ಸೇನೆಯಲ್ಲಿನ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಾಗಿ ಆರಂಭಗೊಳ್ಳುತ್ತಿರುವ ಅಗ್ನಿಪಥ ಯೋಜನೆಗೆ ಕೇಂದ್ರ ಸಂಪುಟ ಸಮಿತಿ ಅನುಮೋದನೆ ನೀಡಿದ್ದು, ಇದೊಂದು ಐತಿಹಾಸಿಕ ನಿರ್ಧಾರವಾಗಿದೆ.
ಅಗ್ನಿಪಥ್ ನೇಮಕಾತಿ ಯೋಜನೆಯಡಿಯಲ್ಲಿ ಸಶಸ್ತ್ರ ಪಡೆಗಳಲ್ಲಿ ಯೋಧರ ಸರಾಸರಿ ವಯಸ್ಸು 26 ವರ್ಷಗಳಾಗಿರಲಿವೆ. ನಾಲ್ಕು ವರ್ಷಗಳ ಕಾಲ ಸೇನೆಯಲ್ಲಿ ಯುವಕರನ್ನು ನೇಮಿಸಿಕೊಳ್ಳಲಾಗುವುದು ಎಂದು ಹೇಳಿದರು. ಅಗ್ನಿಪಥ್ ನೇಮಕಾತಿ ಯೋಜನೆಯು ಪರಿವರ್ತಕ ಉಪಕ್ರಮವಾಗಿದ್ದು ಅದು ಸಶಸ್ತ್ರ ಪಡೆಗಳಿಗೆ ಯುವ ಪ್ರೊಫೈಲ್ ಅನ್ನು ಒದಗಿಸುತ್ತದೆ. ಅಂತೆಯೇ ಈ ಯೋಜನೆಯೊಂದಿಗೆ ಯೋಧರು ಕೆಲಸವನ್ನು ತೊರೆಯುವಾಗ ಸೇವಾ ನಿಧಿ ಪ್ಯಾಕೇಜ್ ಅನ್ನು ಪಡೆಯಲಿದ್ದಾರೆ.
ನಾಲ್ಕು ವರ್ಷಗಳ ಕಾಲ ಸೇನೆಗೆ ಯುವಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಯಾವುದೇ ವ್ಯಕ್ತಿಯು ಜೀವನದಲ್ಲಿ ಒಮ್ಮೆಯಾದರೂ ಸೇನೆಯ ಸಮವಸ್ತ್ರ ಧರಿಸಬೇಕೆಂಬ ಹಂಬಲ ಹೊಂದಿರುತ್ತಾರೆ. ಹಾಗೆಯೇ ಈ ಸೈನಿಕರು ಹೊಸ ಹೊಸ ಟೆಕ್ನಾಲಜಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಹೆಲ್ತ್ ಹಾಗೂ ಫಿಟ್ನೆಸ್ ಕಡೆಗೆ ಹೆಚ್ಚು ಒತ್ತು ನೀಡಲಿದ್ದಾರೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದ್ದು, ನಿರುದ್ಯೋಗ ಸಮಸ್ಯೆ ದೂರವಾಗಲಿದೆ. ಭಾರತೀಯ ಅರ್ಥವ್ಯವಸ್ಥೆಯೂ ಸುಧಾರಿಸಲಿದೆ. ಉತ್ಪಾದನಾ ಸಾಮರ್ಥ್ಯ ಹೆಚ್ಚಲಿದೆ ಎಂದೂ ರಾಜನಾಥ್ ಸಿಂಗ್ ಹೇಳಿದ್ರು. ಇದನ್ನೂ ಓದಿ : – ರಾಜಾಧಿರಾಜ ಗೋವಿಂದ ದೇವಾಲಯ ಲೋಕಾರ್ಪಣೆಗೊಳಿಸಿದ ರಾಷ್ಟ್ರಪತಿ ಕೋವಿಂದ್
ಅಗ್ನಿಪಥ್ ಯೋಜನೆಯಲ್ಲಿ, ದೇಶದ ಎಲ್ಲಾ ಮೂರು ಸೇನೆಗಳಾದ ನೌಕಾಪಡೆ, ಭೂಸೇನೆ, ವಾಯುಸೇನೆಗಳ ಸೈನಿಕರು ಕೇವಲ ಮೂರು ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಬೇಕಾಗುತ್ತದೆ. ನಿವೃತ್ತಿ ಮತ್ತು ಪಿಂಚಣಿ ರೂಪದಲ್ಲಿ ಸರ್ಕಾರಕ್ಕೆ ಯಾವುದೇ ಹೊರೆ ಇರುವುದಿಲ್ಲ. ಸೇನೆಗೆ ಸೇರಲು ಬಯಸುವ ಎಲ್ಲಾ ಯುವಕರಿಗೂ ಅವಕಾಶ ನೀಡಲಾಗುವುದು. ಈಗ ಸರ್ಕಾರವು ಕೇವಲ 3 ವರ್ಷಕ್ಕೆ ಸೈನಿಕರನ್ನು ಆಯ್ಕೆ ಮಾಡುತ್ತದೆ. ಈ ಸಮಯದಲ್ಲಿ ಅವರು ವಿವಿಧ ಕ್ಷೇತ್ರಗಳಲ್ಲಿ ಅನೇಕ ತೊಂದರೆ ಮತ್ತು ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ : – 777 ಚಾರ್ಲಿ ಸಿನಿಮಾ ನೋಡಿ ಕಣ್ಣೀರು ಸುರಿಸಿದ ಸಿಎಂ ಬಸವರಾಜ ಬೊಮ್ಮಾಯಿ