ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ವಾಸೀಂ ಪಠಾಣ್ ನನ್ನ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ರಿಲೀಸ್ ಮಾಡಿದ ಕೆಲವೇ ಕ್ಷಣಗಳಲ್ಲಿ ಬಂಧನವಾಗಿದೆ. ಘಟನೆ ನಡೆದ 4 ದಿನಗಳ ಬಳಿಕ ವಶಕ್ಕೆ ಪಡೆಯಲಾಗಿದೆ.
ಈತ ಹುಬ್ಬಳ್ಳಿ ಗಲಭೆಗೆ ಪ್ರಚೋದನೆ ನೀಡಿದ್ದ ಎನ್ನಲಾಗಿದೆ. ಪೊಲೀಸರು ಈತನಿಗೆ ಶರಣಾಗುವಂತೆ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಳಗ್ಗೆ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್ ಮಾಡಿದ್ದ. ವಿಡಿಯೋ ರಿಲೀಸ್ ಮಾಡಿದ ಕೆಲವೇ ಕ್ಷಣಗಳಲ್ಲಿ ಬಂಧನವಾಗಿದೆ.
ವಿಡಿಯೋದಲ್ಲಿ ನಾನು ಪ್ರಚೋದನೆ ನೀಡಿಲ್ಲ. ಗಲಭೆಕೋರರನ್ನ ಸಮಾಧಾನ ಮಾಡುವ ಕೆಲಸ ಮಾಡುತ್ತಿದ್ದೆ. ಪ್ರತಿಭಟನೆ ಸಂದರ್ಭದಲ್ಲಿ ಕರೆಂಟ್ ಹೋಯ್ತು.ಕೆಲ ಜನ ಮುಖಕ್ಕೆ ಮಾಸ್ಕ್ ಹಾಕಿಕೊಂಡವರನ್ನ ನಾನು ನೋಡಿದ್ದೆ ಎಂದು ತಿಳಿಸಿದ್ದಾನೆ. ಪೊಲೀಸರಿಗೆ ತನಿಖೆಗೆ ಎಲ್ಲಾ ರೀತಿಯಲ್ಲಿ ಸಹಕರಿಸುವುದಾಗಿ ತಿಳಿಸಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ನನ್ನ ಬಗ್ಗೆ ಅಪಪ್ರಚಾರ ಮಾಡಲಾಗ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಯಾರನ್ನೂ ಪ್ರಚೋದಿಸುವ ಮಾತು ಆಡಿಲ್ಲ ಎಂದು ಹೇಳಿದ್ದಾನೆ. ಆದರೂ ನನ್ನ ಮಾಸ್ಟರ್ ಮೈಂಡ್ ಅನ್ತಾರೆ ಎಂದು ದೂರಿದ್ದ.
ಇದನ್ನು ಓದಿ :- PSI – ಪಿಎಸ್ ಐ ನೇಮಕಾತಿ ಪ್ರಕರಣ – ಕಾಂಗ್ರೆಸ್ ಶಾಸಕನ ಗನ್ ಮ್ಯಾನ್ ಬಂಧನ