ಯುವತಿ ಮೇಲೆ ಸಾಮಾಹಿಕ ಅತ್ಯಾಚಾರ ಹಾಗೂ ಹಿಂಸೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಹೊಸ ತಲೆ ನೋವು ಶುರುವಾಗಿದೆ. ಇದಕ್ಕೆ ಬಂಧಿಸಲಾದ 6 ಆರೋಪಿಗಳ ಪೈಕಿ ಒಬ್ಬನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಬಾಂಗ್ಲಾದೇಶ ಮೂಲದ 6 ಜನರನ್ನು ಬಂಧಿಸಿದ್ದ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಒಂದು ತಂಡ ಕೇರಳಕ್ಕೆ ಭೇಟಿ ನೀಡಿದ್ದರೆ, ಮತ್ತೊಂದು ತಂಡ ಬಾಂಗ್ಲಾ ವಲಸಿಗರಿಗೆ ಆಧಾರ್ ಕಾರ್ಡ್ ನೀಡಿದವರ ಬೆನ್ನು ಬಿದ್ದಿದೆ.
ತನಿಖೆ ಪ್ರಗತಿಯಲ್ಲಿ ಇರುವಾಗಲೇ ಆರೋಪಿಗಳ ವಿಚಾರಣೆ ನಡುವೆ ಪೊಲೀಸರಿಗೆ ಹೊಸ ತಲೆನೋವು ಶುರುವಾಗಿದ್ದು, 6 ಆರೋಪಿಗಳಲ್ಲಿ ಒಬ್ಬ ಆರೋಪಿ ಮೊಹ್ಮದ್ ಬಾಬು ಶೇಖ್ ಎಂಬಾತನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ವಿಚಾರಣೆ ವೇಳೆ ಆರೋಪಿಗಳಿಗೆ ಪೊಲೀಸರು ಕೊರೊನಾ ಟೆಸ್ಟ್ ಮಾಡಿಸಿದ್ದರು. ಶುಕ್ರವಾರ ಮಧ್ಯಾಹ್ನ ವರದಿ ಬಂದಿದ್ದು, ಆರೋಪಿ ಮೊಹ್ಮದ್ ಶೇಖ್ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ವಿಚಾರಣೆ ವೇಳೆ ಪೊಲೀಸರಿಗೆ ಹೊಸ ತಲೆನೋವು ಶುರುವಾಗಿದ್ದು, ಭಯದಲ್ಲೇ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.