ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,73,790 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 3617 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ 6 ವಾರಗಳಲ್ಲೇ ಕನಿಷ್ಟ ಮಟ್ಟಕ್ಕೆ ಕುಸಿದಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2.77,29247ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 3,22,512ಕ್ಕೆ ಜಿಗಿತ ಕಂಡಿದೆ.
ಕಳೆದ 24 ಗಂಟೆಯಲ್ಲಿ 2,84,601 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 2,51,78,011ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,28,724ಕ್ಕೆ ಇಳಿಕೆಯಾಗಿದೆ.