ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2.74 ಲಕ್ಷ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 4106 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಏಪ್ರಿಲ್ 21ರ ನಂತರ ಇದೇ ಮೊದಲ ಬಾರಿ 3 ಲಕ್ಷಕ್ಕಿಂತ ಕಡಿಮೆ ಸಂಖ್ಯೆ ಪ್ರಕರಣಗಳು ಪತ್ತೆಯಾಗಿವೆ. ಆದರೆ ಸೋಂಕು ಪ್ರಮಾಣ 4 ಸಾವಿರಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇರುವುದು ಆತಂಕ ಹೆಚ್ಚಿಸಿದೆ.
ದೇಶದಲ್ಲಿ 3,78,741 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 2,11,74,076ಕ್ಕೆ ಜಿಗಿತ ಕಂಡಿದೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,49,65,463ಕ್ಕೆ ಏರಿಕೆ ಕಂಡಿದ್ದು, ಸಾವಿನ ಸಂಖ್ಯೆ 2,74,390ಕ್ಕೆ ಜಿಗಿತ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 35,16,997ಕ್ಕೆ ತಲುಪಿದೆ.