ದೇಶದಲ್ಲಿ ಕಳೆದ 24 ಗಂಟೆಯಲ್ಲಿ 31,923 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 282 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,35,63,421ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 4,46,050ಕ್ಕೆ ಏರಿದೆ.
ಒಂದು ದಿನದಲ್ಲಿ 31,990 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,28,15,731ಕ್ಕೆ ಜಿಗಿತ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,01,640ಕ್ಕೆ ಇಳಿಕೆಯಾಗಿದೆ. ದೇಶದಲ್ಲಿ ಲಸಿಕೆ ಪಡೆದವರ ಸಂಖ್ಯೆ 78 ಕೋಟಿ ದಾಟಿದೆ.