ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಬಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಕೊರೊನಾ ಸ್ಥಿತಿಗತಿ ಮತ್ತು ಲಸಿಕೆ ಲಭ್ಯತೆ ಕುರಿತಾಗಿ ಪ್ರಧಾನಿಗಳು ಸಭೆ ನಡೆಸಲಿದ್ದು, ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ದೇಶದಲ್ಲಿ ಕೊರೊನಾ ಎರಡನೆಯ ಅಲೆ ಭಾರಿ ಆತಂಕವನ್ನು ಸೃಷ್ಟಿಸಿದೆ. ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿರುವ ಕಾರಣ ಸದ್ಯದ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಈಗಾಗಲೇ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್ ಸ್ಥಿತಿಗತಿಗಳ ಬಗ್ಗೆ ಸಂವಾದ ನಡೆಸಿದ್ದಾರೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,34,692 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,23,354 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 1,341 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 1,75,649ಕ್ಕೆ ಏರಿಕೆಯಾಗಿದೆ.