ಆಟೋ ಹಾಗೂ ಗೂಡ್ಸ್ ಟಂಟಂ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನೀರಮಾನವಿ ಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಹುಲಿರಾಜ್ ಕರಿಯಪ್ಪ(15) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆ ಗಾಗಿ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಯಿಂದ ಕೆಲವೊತ್ತು ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ತಗೊಂಡ ಟ್ರಾಫಿಕ್ ಸಮಸ್ಯೆ ಎದುರಾಯಿತು. ಸ್ಧಳಕ್ಕೆ ಮಾನವಿ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿ :- ಜಿಮ್ ನಲ್ಲಿ ವರ್ಕೌಟ್ ಮಾಡೋವಾಗ ಹುಷಾರ್….! ಕುಸಿದು ಬಿದ್ದು ಮಹಿಳೆ ಸಾವು