ಪೊಲೀಸರು ತಪಾಸಣೆ ಮಾಡಲು ಮುಂದಾದಾಗ ಗಾಂಜಾ ಸಾಗಿಸುತ್ತಿದ್ದ ಚಾಲಕ ತಪ್ಪಿಸಿಕೊಳ್ಳುವ ಯತ್ನದಲ್ಲಿ ಆಟೋ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕಾಶಿಮಠದಲ್ಲಿ ನಡೆದಿದೆ.
ರಿಕ್ಷಾದಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದು, ಒಂದು ಗಾಂಜಾ ಕಟ್ಟವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಆಸೀಫ್ ಯಾನೆ ಅಚಿ (28) ಫರಾಝ್ (23) ಎಂದು ಗುರುತಿಸಲಾಗಿದೆ.
ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಉಕ್ಕುಡ ಕಡೆಯಿಂದ ವಿಟ್ಲ ಪೇಟೆ ಕಡೆಗೆ ರಿಕ್ಷಾ ಹೋಗುವುದನ್ನು ಗಮನಿಸಿದಾಗ ಆಟೋ ರಿಕ್ಷಾವನ್ನು ಅದರ ಚಾಲಕನಿಗೆ ನಿಲ್ಲಿಸಲು ಸೂಚನೆ ನೀಡಿದಾಗ ರಿಕ್ಷಾ ಚಾಲಕ ಒಮ್ಮೆಲೇ ಆಟೋ ರಿಕ್ಷಾವನ್ನು ತಿರುಗಿಸಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ 30 ಅಡಿ ದೂರದಲ್ಲಿ ಮಗುಚಿ ಬಿತ್ತು.
ರಕ್ಷಣೆಗೆ ಸಿಬ್ಬಂದಿ ಹೋದಾಗ ಆರೋಪಿಗಳು ಓಡಿ ಹೋಗಲು ಪ್ರಯತ್ನಿಸಿದ್ದು ಅನುಮಾನಗೊಂಡ ಪೊಲೀಸ್ ಸಿಬ್ಬಂದಿ ಹಿಡಿದು ವಿಚಾರಣೆ ನಡೆಸಿದಾಗ ರಿಕ್ಷಾ ಚಾಲಕನ ಸೀಟಿನ ಅಡಿಯಲ್ಲಿದ್ದ ಒಂದು ಕಟ್ಟು ಗಂಜಾ ಪತ್ತೆಯಾಗಿದೆ.
ಗಾಂಜಾದ ಕಟ್ಟು ಎಂದು ತೋರಿಸಿ ಇದನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದು, ಕೂಡಲೇ ವಾಹನವನ್ನು ಮತ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.