ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K SHIVKUMAR ) ಗೆ ಇಡಿ (ED ) ಮತ್ತೆ ಕಂಟಕವಾಗುವ ಸಾಧ್ಯತೆಗಳಿವೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರು ದೆಹಲಿಯಲ್ಲಿರುವ ಇಡಿ ವಿಶೇಷ ನ್ಯಾಯಾಲಯ ಮುಂದೆ ಹಾಜರಾಗಲಿದ್ದಾರೆ.
ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಚಾರ್ಜ್ಶೀಟ್ ಹಿನ್ನಲೆ ಡಿ.ಕೆ.ಶಿವಕುಮಾರ್ ಸೇರಿ ಐದು ಮಂದಿ ಆರೋಪಿಗಳಿಗೆ ಕೋರ್ಟ್ (COURT) ಸಮನ್ಸ್ ನೀಡಿತ್ತು. ಸಮನ್ಸ್ ಹಿನ್ನೆಲೆ ಇಂದು ಡಿ.ಕೆ.ಶಿವಕುಮಾರ್ ವಿಚಾರಣೆ ಹಾಜರಾಗಲಿದ್ದಾರೆ. ಮೊದಲ ದಿನದ ವಿಚಾರಣೆಯಾಗಿರುವ ಹಿನ್ನೆಲೆ ಹೈಕೋರ್ಟ್ನಿಂದ ಈ ಹಿಂದೆ ಪಡೆದ ಜಾಮೀನು ಪರಿಶೀಲನೆ ನಡೆಯಲಿದೆ. ಈವರೆಗೂ ಇಡಿ ಸಲ್ಲಿಸಿದ ಚಾರ್ಜ್ಶೀಟ್ ಲಭ್ಯವಾಗದ ಹಿನ್ನೆಲೆ ವಿಚಾರಣೆ ಮುಂದೂಡಲು ಡಿಕೆಶಿ ಪರ ವಕೀಲರು ಮನವಿ ಮಾಡುವ ಸಾಧ್ಯತೆಯಿದೆ.
ಇದನ್ನೂ ಓದಿ : – EKNATH SINDHE -ಏಕನಾಥ್ ಸಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿ – ಬಿಜೆಪಿಯಿಂದ ಅಧಿಕೃತ ಘೋಷಣೆ