2024ರ ಜನವರಿ (January) ಯೊಳಗೆ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ (Chennai) ವೇ ಕಾಮಗಾರಿಯನ್ನು ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin gadkari) ತಿಳಿಸಿದ್ದಾರೆ. 8 ಪಥಗಳ ಈ ಎಕ್ಸ್ ಪ್ರೆಸ್ ವೇ ಕಾಮಗಾರಿಯ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ, ಕೋಲಾರದ ವಡಗಾನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ ಬೆಂಗಳೂರು- ಚೆನೈ ಹೈವೇ ಕರ್ನಾಟಕ (Karnataka) ದಲ್ಲಿ 3 ಪ್ಯಾಕೇಜ್ ಇದ್ದು, ಈ ಪೂರ್ಣ ಎಕ್ಸ್ ಪ್ರೆಸ್ ವೇಯನ್ನು ಸುಮಾರು 1700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ.
Interacting with Media on the progress of Bengaluru – Chennai Expressway, Karnataka https://t.co/u5OXQnoZLo
— Nitin Gadkari (@nitin_gadkari) January 5, 2023
ಕರ್ನಾಟಕದಲ್ಲಿ ಹಾದು ಹೋಗುವ ಹೆದ್ದಾರಿ ಉದ್ದ 71 ಕಿ.ಮೀ ಇದ್ದು, ಇದಕ್ಕಾಗಿ 5096 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ವಿವರಿಸಿದರು. ಕರ್ನಾಟಕ ಭಾಗದಲ್ಲಿನ ಹೆದ್ದಾರಿಯ ಕಾಮಗಾರಿ ಪೈಕಿ ಈಗಾಗಲೇ ಶೇ.34ರಷ್ಟು ಪೂರ್ಣಗೊಂಡಿದೆ. ಈ ಎಕ್ಸ್ ಪ್ರೆಸ್ ವೇ ಲೋಕಾರ್ಪಣೆಗೊಂಡ ಬಳಿಕ, ಬೆಂಗಳೂರಿನಿಂದ 2.15 ಗಂಟೆಯಲ್ಲಿ ಚೆನ್ನೈಗೆ ಹೋಗಬಹುದು. ಲಾಜಿಸ್ಟಿಕ್ ವೆಚ್ಚ ಉಳಿಸಲು ಇದರಿಂದ ಸಾಧ್ಯವಾಗಲಿದೆ. ದೇಶದಲ್ಲಿ ಸದ್ಯ ಲಾಜಿಸ್ಟಿಕ್ (Logistic) ವೆಚ್ಚ ಶೇ. 16ರಷ್ಟಿದೆ. ಹಾಗಾಗಿ, ಎಕ್ಸ್ ಪ್ರೆಸ್ ವೇಯಿಂದ ಶೇ.4ರಷ್ಟು ವೆಚ್ಚವನ್ನು ತಗ್ಗಿಸಬಹುದಾಗಿದೆ ಎಂದು ತಿಳಿಸಿದರು. ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇಯನ್ನು ಅಮೃತ ಮಹೋತ್ಸವ ಪಕ್ಷಿಗಳ ಗಾರ್ಡನ್ ಮಾಡಲಿದ್ದೇವೆ. ಜೊತೆಗೇ ಅಮೃತ್ ಸರೋವರ ಕೂಡ ನಿರ್ಮಾಣ ಮಾಡಲಾಗುವುದು ಎಂದರು. ಇದನ್ನು ಓದಿ : – ಸ್ಯಾಂಟ್ರೋ ರವಿ ಹೆಸರನ್ನ ನಾನು ಕೇಳೇ ಇಲ್ಲ – ಡಿ ಕೆ ಶಿವಕುಮಾರ್
A few more clicks from Bengaluru – Chennai Expressway inspection, with Karnataka PWD Minister Shri @CCPatilBJP Ji, Chikballapur MP Shri @BNBachegowda_MP Ji, and Kolar MP Shri @bjp_muniswamy Ji. #PragatiKaHighway #GatiShakti #BengaluruChennaiExpressway pic.twitter.com/1sEtUyZmcq
— Nitin Gadkari (@nitin_gadkari) January 5, 2023
ಇದೇ ವೇಳೆ, ಬೆಂಗಳೂರು ನಗರದಲ್ಲಿ ಟ್ರಾಫಿಕ್ ಕಡಿಮೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ತಿಳಿಸಿದ ಅವರು, ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಮಾಡಲಿದ್ದೇವೆ ಎಂದು ಹೇಳಿದ್ರು. ಬೆಂಗಳೂರಿನ ಪೀಣ್ಯ ಫ್ಲೈ ಓವರ್ ವಿಚಾರ ಕುರಿತು ಮಾತನಾಡಿ, ಈಗಾಗಲೇ ಬಿಡ್ ಬಂದಿದ್ದು, ವ್ಯವಹಾರವನ್ನ ಪೂರ್ತಿ ಮಾಡಲಾಗುವುದು. ಸಮಸ್ಯೆಯನ್ನು ಆದಷ್ಟು ಬೇಗ ನಿವಾರಿಸಲಾಗುವುದು ಎಂದು ತಿಳಿಸಿದರು.
ಇದನ್ನು ಓದಿ : – ದಶಪಥ ಹೆದ್ದಾರಿಯಲ್ಲಿ ಮೂಲಭೂತ ಸೌಕರ್ಯದ ಕೊರತೆ ಒಪ್ಪಿಕೊಂಡ ಯೋಗೇಶ್ವರ್