ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣವರ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಭಾನುವಾರ ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದ ಅವರಿಗೆ ಕೊರೊನಾ ಸೋಂಕು ಇರುವುದು ವರದಿಯಲ್ಲಿ ದೃಢಪಟ್ಟಿದೆ.
ಎಸ್ಪಿ ರವಿ ಡಿ ಚನ್ನಣ್ಣನವರಿಗೆ ಕೊರೊನಾ ಬಂದ ಹಿನ್ನೆಲೆಯಲ್ಲಿ ಕಚೇರಿಯ ಎಲ್ಲಾ ಸಿಬ್ಬಂದಿಗಳು ಐಸೋಲೇಷನ್ಗೆ ಒಳಗಾಗಿದ್ದಾರೆ.
ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಜಾಗೃತೆ ವಹಿಸಿ ಸಾಮಾಜಿಕ ಅಂತರವನ್ನು ಕಾಪಾಡಿ ಮಾಸ್ಕ್ ಧರಸಿ, ಅನಗತ್ಯವಾಗಿ ಹೊರಗಡೆ ಸಂಚರಿಸಬೇಡಿ ಎಂದು ರವಿ ಡಿ ಚನ್ನಣ್ಣನವರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.