ಶೀಘ್ರದಲ್ಲೇ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗುವುದು ಎಂದು ಬಿಜೆಪಿ ರಾಜ್ಯ ವೀಕ್ಷಕ ಅರುಣ್ ಸಿಂಗ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ ಎಂದರು.
ಮುಖ್ಯಮಂತ್ರಿ ಬಿ,ಎಸ್.ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ವಿರುದ್ಧ ಸತತವಾಗಿ ಆರೋಪ ಮಾಡುತ್ತಿರುವ ಯತ್ನಾಳ್ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಮೂರು ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಅವರು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಯತ್ನಾಳ್ ಅವರನ್ನು ಬಿಜೆಪಿ ನಂಬಿಕೊಂಡಿಲ್ಲ. ಶೇ. 0.01ರಷ್ಟು ನಂಬಿಕೆ ಕೂಡ ಅವರ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಅವರನ್ನು ಉಪ ಚುನಾವಣೆ ಮುಗಿಯುತ್ತಿದ್ದಂತೆ ಪಕ್ಷದಿಂದ ಹೊರಹೊಕಲಿದ್ದೇವೆ ಎಂದು ಅವರು ಹೇಳಿದರು.
ಯತ್ನಾಳ್ ಅವರ ಹೇಳಿಕೆ ಬಗ್ಗೆ ನಾನು ಮಾತನಾಡಲ್ಲ. ಯತ್ನಾಳ್ ಬಗ್ಗೆ ಮಾತನಾಡಿದರೆ ಅವರು ಹೆಚ್ಚು ಪ್ರಸಿದ್ಧಿ ಆಗಿಬಿಡುತ್ತಾರೆ.