ಬೆಂಗಳೂರು: ಬಸವಕಲ್ಯಾಣ ಉಪ ಚುನಾವಣಾ ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಪಕ್ಷ ಉಚ್ಚಾಟನೆ ಮಾಡಿದೆ. ಈ ಹಿಂದೆ ಬಿಜೆಪಿಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
ಬಸವಕಲ್ಯಾಣ ಕ್ಷೇತ್ರದಿಂದ ಬಿಜೆಪಿಯಿಂದ ಸಿಗದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖೂಬಾ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರು ಕೋವಿಡ್ಗೆ ಬಲಿಯಾಗಿದ್ದರು. ಹೀಗಾಗಿ ಬಸವಕಲ್ಯಾಣ ಕ್ಷೇತ್ರ ತೆರವಾಗಿತ್ತು. ಇಂದು ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ.
ಬಿಜೆಪಿಯಿಂದ ಮಲ್ಲಿಕಾರ್ಜುನ ಖೂಬಾ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷ ಅವರನ್ನು ಕಡೆಗಣಿಸಿ, ಶರಣು ಸಲಗರ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಸಹಜವಾಗಿಯೇ ಅಸಮಾಧಾನಗೊಂಡ ಖೂಬಾ ಅವರು ಪಕ್ಷಕ್ಕೆ ಸೆಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.