ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಹೊರಟ್ಟಿ ಅವರನ್ನು ಸೋಮವಾರ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಡಪಟ್ಟಿದೆ.
ಬುಧವಾರ ಬೆಳಿಗ್ಗೆ ಪಾಸಿಟಿವ್ ವರದಿ ಬರುತ್ತಿದ್ದಂತೆ ಅವರ ಆಪ್ತ ಕಾರ್ಯದರ್ಶಿ ವಿಶ್ವನಾಥ್ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಅಲ್ಲದೇ ಅವರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ಹೊರಟ್ಟಿ ಪ್ರಸ್ತುತ ಹುಬ್ಬಳ್ಳಿಯ ಮನೆಯಲ್ಲಿ ಹೋಂ ಕ್ವಾರಂಟೇನ್ ಆಗಿದ್ದಾರೆ.