ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ( basavaraj bommai ) ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ( yeddiurappa ) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರ ಸರಕಾರಿ ನಿವಾಸ ‘ಕಾವೇರಿಗೆ’ ಭೇಟಿ ನೀಡಿ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಸದ್ಯದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ( suresh gowda ) ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಇದನ್ನೂ ಓದಿ : – ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ, ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಶ್ರಮಿಸುತ್ತೇನೆ -ನಿತೀಶ್ ಕುಮಾರ್
ಕಾಂಗ್ರೆಸ್ ( congress )ಟ್ವೀಟ್ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿತ್ತು. ಸಚಿವರು, ಬಿಜೆಪಿ ಶಾಸಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ಈ ನಡುವೆ ಉಭಯನಾಯಕರು ಇಂದು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ : – ನನ್ನ ಸತ್ಯ ಅವರಿಗೆ ಗೊತ್ತು, ಅವರ ಸತ್ಯ ನನಗೆ ಗೊತ್ತು – ಸಿದ್ದರಾಮಯ್ಯಗೆ ಟಾಂಗ್ ನೀಡಿದ ಸುಧಾಕರ್