BSY ನಿವಾಸಕ್ಕೆ ಬಸವರಾಜ ಬೊಮ್ಮಾಯಿ, ಕುತೂಹಲ ಕೆರಳಿಸಿದ ಮಾತುಕತೆ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ( basavaraj bommai ) ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ( yeddiurappa ) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರ ಸರಕಾರಿ ನಿವಾಸ ‘ಕಾವೇರಿಗೆ’ ಭೇಟಿ ನೀಡಿ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಸದ್ಯದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ( suresh gowda ) ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಇದನ್ನೂ ಓದಿ : –  ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ, ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಶ್ರಮಿಸುತ್ತೇನೆ -ನಿತೀಶ್ ಕುಮಾರ್

ಕಾಂಗ್ರೆಸ್ ( congress )ಟ್ವೀಟ್ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿತ್ತು. ಸಚಿವರು, ಬಿಜೆಪಿ ಶಾಸಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ಈ ನಡುವೆ ಉಭಯನಾಯಕರು ಇಂದು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ : –  ನನ್ನ ಸತ್ಯ ಅವರಿಗೆ ಗೊತ್ತು, ಅವರ ಸತ್ಯ ನನಗೆ ಗೊತ್ತು – ಸಿದ್ದರಾಮಯ್ಯಗೆ ಟಾಂಗ್ ನೀಡಿದ ಸುಧಾಕರ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!