ಭಾರತ ಜೋಡೋ ( bharth jodo ) ಯಾತ್ರೆಯಲ್ಲಿ ಬ್ಯುಸಿಯಾಗಿರುವ ಕೈ ನಾಯಕ ರಾಹುಲ್ ಭಾನುವಾರ ಜಡಿ ಮಳೆ ಸುರಿಯುತ್ತಿದ್ದರೂ ಭಾಷಣ ಮಾಡಿದ್ದರು. ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ ( rahul gandhi ) ಭಾಷಣ ಮಾಡುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಈ ಫೋಟೋವನ್ನು ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಕೂಡ ಶೇರ್ ಮಾಡಿಕೊಂಡು ಕ್ಯಾಪ್ಷನ್ ಕೊಟ್ಟಿದ್ದಾರೆ. ಇಲ್ಲಿ ರಾಹುಲ್ ಗಾಂಧಿ ( rahul gandhi ) ಮಳೆಯಲ್ಲಿ ಭಾಷಣ ಮಾಡುತ್ತಿರುವುದು ಸುದ್ದಿಯಲ್ಲ, ಆ ಜಡಿ ಮಳೆಯಲ್ಲಿಯೂ ಭಾಷಣ ಕೇಳಲು ಸಾಕಷ್ಟು ಮಂದಿ ನೆರೆದಿರುವುದೇ ವಿಶೇಷ. ಜನ ನೆರೆದಿರುವುದೇ ಎಲ್ಲವನ್ನೂ ನಿಮಗೆ ತಿಳಿಸುತ್ತದೆ. ಅಂದರೆ ರಾಹುಲ್ ಗಾಂಧಿ ಭಾಷಣ ಕೇಳಲು ಜನ ಕಿಕ್ಕಿರಿದು ನಿಂತಿರುವುದು ಗಮನಸೆಳೆದಿದೆ ಎಂದು ಹೇಳುವ ಮೂಲಕ ರಮ್ಯಾ ಅವರು ಕೈ ನಾಯಕನನ್ನು ಹಾಡಿ ಹೊಗಳಿದ್ದಾರೆ. ಇದನ್ನೂ ಇದಿ : – ರಚಿತಾ ರಾಮ್ ಬರ್ತ್ ಡೇ ಸಂಭ್ರಮ – ಡಿಂಪಲ್ ಕ್ವೀನ್ ಮನೆ ಮುಂದೆ ಜಮಾಯಿಸಿದ ಫ್ಯಾನ್ಸ್
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಭಾನುವಾರ ಮೈಸೂರು ( mysore ) ತಲುಪಿದೆ. ಬಂಡೀಪಾಳ್ಯ ಸಮೀಪ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ರಾಹುಲ್ ಗಾಂಧಿ ಭಾಷಣದ ವೇಳೆ ಭಾರೀ ಮಳೆಯಾಗಿದೆ. ಮಳೆಯಲ್ಲಿಯೂ ರಾಹುಲ್ ಗಾಂಧಿ ಭಾಷಣ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಕಾಂಗ್ರೆಸ್ ನಾಯಕರು ಸಹ ಮಳೆಯಲ್ಲಿ ನೆನೆಯುತ್ತಾ ವೇದಿಕೆ ಮೇಲೆಯೇ ಕುಳಿತುಕೊಂಡಿದ್ದರು.
ಇದನ್ನೂ ಇದಿ : – ಹೊಸಕೋಟೆ ಬಳಿ ಮಧ್ಯರಾತ್ರಿ ಭೀಕರ ಅಪಘಾತ – 18 ಮಂದಿಗೆ ಗಾಯ