ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ್ ಹೊರಟ್ಟಿ, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿಗೆ ಬರುವುದು ಒಳ್ಳೆಯದು ಎಂದು ಅಮಿಷಾ ಹೇಳಿದರು. ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ ಆದರೆ ಮತದಾರರ ಅಭಿಪ್ರಾಯದ ಮೇಲೆ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದರು..ಇದನ್ನು ಓದಿ:-ರಾಜ್ಯಕ್ಕೆ ಅಮಿತ್ ಶಾ ಭೇಟಿ – ನಾಯಕತ್ವ ಬದಲಾವಣೆ ಕುರಿತು ಹೆಚ್ಚಿದ ಕುತೂಹಲ
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ್, ಅರಗ ಜ್ಞಾನೆಂದ್ರ , ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.ಇದನ್ನು ಓದಿ :- ಬೆಂಗಳೂರಿನಲ್ಲಿ ಇನ್ನೂ 2 ದಿನ ಮಳೆ ಬರುವ ಸಾಧ್ಯತೆ ಇದೆ – ಗೌರವ್ ಗುಪ್ತ