ಬೆಂಗಳೂರಿನಲ್ಲಿ ಮಾಜಿ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಅವರನ್ನು ಮನೆಯ ಸಮೀಪವೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆಗೈದು ಭೀಕರವಾಗಿ ಹತ್ಯೆ ಮಾಡಿದ್ದಾರೆ.
ಛಲವಾದಿ ಪಾಳ್ಯದ ಮಾಜಿ ಕಾರ್ಪೊರೇಟ್ ರೇಖಾ ಕದೀರೇಶ್ ಗುರುವಾರ ಮುಂಜಾನೆ ಬಿಜೆಪಿ ಕಚೇರಿ ಮುಂದಿರುವ ಅಂಜನಪ್ಪ ಗಾರ್ಡನ್ ನಲ್ಲಿ ಆಹಾರ ಹಂಚುತ್ತಿದ್ದ ವೇಳೆ ಹಲ್ಲೆ ಮಾಡಿದ ಇಬ್ಬರು ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಕುತ್ತಿಗೆ ಹಾಗೂ ತಲೆಗೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತಕ್ಷಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಪೊಲೀಸರು ಕರೆದೊಯ್ದರೂ ಅತೀವ ರಕ್ತಸ್ರಾವದಿಂದ ಅಸುನೀಗಿದರು.
ಕದಿರೇಶ್ ಗೆ ರೇಖಾ ಎರಡನೇ ಪತ್ನಿಯಾಗಿದ್ದು, ಸಹಚರರಿಂದಲೇ ಈ ಕೃತ್ಯ ಆಗಿರಬಹುದು ಎಂದು ಶಂಕಿಸಲಾಗಿದೆ. ಹತ್ಯೆಗೆ ಸಾಕಷ್ಟು ಪೂರ್ವ ತಯಾರಿ ಮಾಡಲಾಗಿದ್ದು, ಬಿಜೆಪಿ ಕಚೇರಿಯಲ್ಲಿದ್ದ ಸಿಸಿಟಿವಿ ಕ್ಯಾಮರಾಗಳನ್ನು ತಿರುಗಿಸಲಾಗಿತ್ತು.
2018ರಲ್ಲಿ ರೇಖಾ ಕದಿರೇಶ್ ಅವರನ್ನು ಕೂಡ ಹತ್ಯೆ ಮಾಡಲಾಗಿದ್ದು, ಇದೀಗ ಪತ್ನಿಯನ್ನೂ ಹತ್ಯೆ ಮಾಡಲಾಗಿದೆ. ಇದರಿಂದ ಹಳೇ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ರೇಖಾ ಕದಿರೇಶ್ ಗಾಂಜಾ ದಂಧೆಯ ಬಗ್ಗೆ ಇತ್ತೀಚೆಗಷ್ಟೇ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹತ್ಯೆ ಆಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಹಾಗೂ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.