ಬೆಂಗಳೂರು ಮಹಾನಗರ ಪಾಲಿಎ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಹತ್ಯೆ ಪ್ರಕರಣದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಗುರುವಾರ ಬೆಳಿಗ್ಗೆ ಮನೆಯ ಸಮೀಪವೇ 17 ಬಾರಿ ಇರಿದು ರೇಖಾ ಕದಿರೇಶ್ ಅವರನ್ನು ಹತ್ಯೆ ಮಾಡಿದ ಪ್ರಕರಣದ ವಿಚಾರಣೆ ತೀವ್ರಗೊಳಿಸಿರುವ ಕಾಟನ್ ಪೇಟೆ ಪೊಲೀಸರು ಕೊಲೆಗೆ ಸಹಕಾರ ನೀಡಿದ ಅನುಮಾನದ ಮೇಲೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪ್ರಮುಖ ಆರೋಪಿಗಳಾದ ಪೀಟರ್ ಹಾಗೂ ಸೂರ್ಯನಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದು, ಸಂಬಂಧಿಕರನ್ನು ಮನೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಇದೇ ವೇಳೆ ಕೊಲೆಗಡುಕರ ಸುಳಿವು ಪಡೆದಿರುವ ಪೊಲೀಸರು ಶೀಘ್ರದಲ್ಲೇ ಅವರನ್ನು ಬಂಧಿಸುವ ಸಾಧ್ಯತೆ ಇದೆ.