ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಿರುವ ಬಿಬಿಎಂಪಿ (BBMP) ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ.
ಕೇಂದ್ರ ಮುಸ್ಲಿಂ ಅಸೋಸಿಯೇಷನ್ ದಾಖಲೆಗಳ ಸಲ್ಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಎಸ್.ಎಂ.ಶ್ರೀನಿವಾಸ ( S.M SRINIVAS ) ತಿಳಿಸಿದ್ದಾರೆ. ಬಿಬಿಎಂಪಿಯ ಕಾನೂನು ಇಲಾಖೆ ವರದಿ ಸಲ್ಲಿಸಿದ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ : – ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ – ಮತ್ತೊಬ್ಬ ಪರೀಕ್ಷೆ ಅಕ್ರಮದ ಅಭ್ಯರ್ಥಿ ಸಿಐಡಿ ಬಲೆಗೆ