ಬೆಂಗಳೂರು: ಸ್ವಚ್ಛ ಸರ್ವೇಕ್ಷಣಾ ಶ್ರೇಯಾಂಕ ವ್ಯವಸ್ಥೆಯ ಸುಧಾರಣೆಗೆ ಬಿಬಿಎಂಪಿ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ನಾಗವಾರದ ವೀರನಪಾಳ್ಯ ಫ್ಲೈ ಓವರ್ ಅಡಿಯಲ್ಲಿ ನಿನ್ನೆ ಈ ಸಂಬಂಧ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಮುಂದಿನ ಎರಡು ತಿಂಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ. ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಮಾಜಿ ಸಚಿವ ಕೆ ಜೆ ಜಾರ್ಜ್ ಪ್ರಮಾಣಪತ್ರಗಳನ್ನು ವಿತರಿಸಿದರು.
ರಾಷ್ಟ್ರಮಟ್ಟದಲ್ಲಿ ಉತ್ತಮ ಸ್ವಚ್ಛ ಶ್ರೇಯಾಂಕವನ್ನು ಸಾಧಿಸಲು ನಾಗರಿಕರ ಭಾಗವಹಿಸುವಿಕೆ ನಿರ್ಣಾಯಕವಾಗಿದೆ. ಈ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನರು ಭಾಗವಹಿಸಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ. ರಾಷ್ಟ್ರಮಟ್ಟದಲ್ಲಿ ಬೆಂಗಳೂರು ಉತ್ತಮ ಶ್ರೇಯಾಂಕವನ್ನು ಸಾಧಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಇಂಥ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನರು ಭಾಗವಹಿಸಬೇಕೆಂದು ಬಿಬಿಎಂಪಿ ವಿಶೇಷ ಆಯುಕ್ತರಾದ ರಣದೀಪ್ ಹೇಳಿದ್ದಾರೆ.