ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿಗೆ ಸಿಕ್ಕಿ ಬಾಲಕಿಯೊಬ್ಬಳು ಅಸುನೀಗಿದ್ದಾಳೆ. ಮಧ್ಯಾಹ್ನ ಒಂದು ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದ ಸುಮಾರು 13 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಉಳಿದವರನ್ನು ಪೊಲೀಸರು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಬೈಕ್ ಸವಾರನೊಬ್ಬನಿಗೆ ಗಂಭೀರ ಗಾಯಗಳಾಗಿವೆ. ಹೆಬ್ಬಾಳ ಪೊಲೀಸ್ ಠಾಣೆಯ ಮುಂಭಾಗ ಘಟನೆ ನಡೆದಿದ್ದು, ಆರ್ ಟಿ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಡರ್ ಪಾಸ್ ಇದ್ದರೂ ಬಳಸದೇ ರಸ್ತೆ ದಾಟಲು ಓರ್ವ ಮಹಿಳೆ ಮತ್ತು ಬಾಲಕಿ ಸೇರಿ ಮೂವರು ಮುಂದಾಗಿದ್ದರು. ಈ ವೇಳೆ ಮುಂದೆ ಬಂದ ಬೈಕ್ ಮತ್ತು ಕಾರ್ ಗಳನ್ನು ನಿಲ್ಲಿಸಿದ್ದರು. ಆದರೆ ಹಿಂಬದಿಯಲ್ಲಿ ವೇಗವಾಗಿ ಬರುತಿದ್ದ ಬಿಬಿಎಂಪಿ ಲಾರಿ ಡಿಕ್ಕಿ ಹೊಡೆದು ಅನಾಹುತ ಸಂಭವಿಸಿದೆ.
ಮಳೆ ನೀರಿನಿಂದ ಅಂಡರ್ ಪಾಸ್ ನಲ್ಲಿ ನೀರು ನಿಂತಿತ್ತು. ಹಾಗಾಗಿ ಜನರಿಗೆ ಅಂಡರ್ ಪಾಸ್ ಬಳಸುವುದು ಸಾಧ್ಯವಾಗುತ್ತಿರಲಿಲ್ಲ. ಅನಿವಾರ್ಯವಾಗಿ ಹೆದ್ದಾರಿ ರಸ್ತೆ ಮೇಲೆಯೆ ನಡೆದಾಡುತ್ತಿದ್ದು ಈ ವೇಳೆ ಈ ದಾರುಣ ಘಟನೆ ನಡೆದಿದೆ.
0 103 Less than a minute