ಆನೇಕಲ್: ಇಂದು ಬೆಳ್ಳಂಬೆಳ್ಳಗೆ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷವಾಗಿ ನಾಲ್ವರ ಮೇಲೆ ದಾಳಿ ಮಾಡಿದೆ. ಶೆಟ್ಟಿಹಳ್ಳಿ ಗ್ರಾಮದ ರಾಮಕ್ಕ ಮಂಜುನಾಥ್ ವೆಂಕಟಸ್ವಾಮಿ ಹಾಗೂ ಶ್ರೀನಿವಾಸ್ ರೆಡ್ಡಿ ಎಂಬುವವರು ಕರಡಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೊನ್ನೆ ಬನ್ನೇರುಘಟ್ಟ ಜೈವಿಕ ಉದ್ಯಾನವನ ದಿಂದ ತಪ್ಪಿಸಿಕೊಂಡಿದ್ದ ಕರಡಿ ಇಂದು ಶೆಟ್ಟಿಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿರುವುದನ್ನು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಶೆಟ್ಟಿಹಳ್ಳಿ ಸುತ್ತಮುತ್ತ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಕರಡಿ ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರಿಸಿದೆ.
ತುಮಕೂರಿನ ಸಿದ್ದಗಂಗಾ ಮಠದ ಅರಣ್ಯದಲ್ಲಿ ರಕ್ಷಣೆ ಮಾಡಿ ತಂದಿದ್ದ ಕರಡಿ ಬನ್ನೇರುಘಟ್ಟದ ಪುನರ್ವಸತಿ ಕೇಂದ್ರದಲ್ಲಿ ಒಬ್ಬರ ಮೇಲೆ ದಾಳಿ ಮಾಡಿ ಅಲ್ಲಿಂದ ತಪ್ಪಿಸಿಕೊಂಡು ಆನೇಕಲ್ ಕಡೆ ಬಂದಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಸದ್ಯ ಬನ್ನೇರುಘಟ್ಟ ಜೈವಿಕ ಉದ್ಯಾನವನದ ರೆಸ್ಕ್ಯೂ ಟೀಂ ಶೆಟ್ಟಿಹಳ್ಳಿ ಕಡೆಗೆ ಬಂದಿದ್ದು ಕರಡಿಗೆ ಅರವಳಿಕೆ ಮದ್ದು ನೀಡಿ ಸೆರೆಹಿಡಿಯಲು ಕಾರ್ಯಾಚರಣೆ ಶುರು ಮಾಡಿದ್ದಾರೆ.