ಬೆಂಗಳೂರುನಲ್ಲಿ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತನನ್ನು ಬಂಧಿಸಲಾಗಿದೆ.
ಕೋವಿಡ್ ವಾರ್ ರೂಂ ಸಿಬ್ಬಂದಿಯನ್ನು ಬೆದರಿಸಿ ಬೇಕಾದವರಿಗೆ ಬೆಡ್ ಹಂಚಿಕೆ ಮಾಡುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಬಂಧಿಸಲಾಗಿದೆ. ಬೊಮ್ಮನಹಳ್ಳಿ ವಾರ್ ರೂಂ ಸಿಬ್ಬಂದಿಯ ಹೇಳಿಕೆ ಮತ್ತು ರೂಂನಲ್ಲಿದ್ದ ಸಿಸಿ ಟಿವಿ ಮಾಹಿತಿ ಆಧರಿಸಿ ಬಂಧನವಾಗಿದೆ.
ಈ ಹಿಂದೆ ವಿಚಾರಣೆಗೆ ಕರೆದಾಗ ಕೋವಿಡ್ ಬಂದಿದೆ ಎಂದು ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ. ಸೋಂಕು ಗುಣಮುಖವಾದ ಬಳಿಕ ಸಿಸಿಬಿ ಪೊಲೀಸರು ಈಗ ಬಾಬುವನ್ನು ಬಂಧಿಸಿದ್ದಾರೆ.