ಬೆಂಗಳೂರಿನಲ್ಲಿ ಕೆಲವು ಬಿಬಿಎಂಪಿ ಅಧಿಕಾರಿಗಳಿಂದ ಬೆಡ್ ಮಾಫಿಯಾ ನಡೆಯುತ್ತಿದ್ದು, ಜನ ಸಾಮಾನ್ಯರಿಗೆ ಬೆಡ್ ಸಿಗದೇ ತೊಂದರೆ ಆಗುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ ಮಾಡಿದರು.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬ್ಬ ವ್ಯಕ್ತಿಯ ಹೆಸರಿನಲ್ಲಿ 12 ಬೆಡ್ ಬುಕ್ಕಿಂಗ್ ಆಗಿದೆ. ಆದರೆ ಆ ವ್ಯಕ್ತಿ ಯಾರು ಎಂದು ಹುಡುಕಿದರೂ ಸಿಗುತ್ತಿಲ್ಲ ಎಂದರು.
ಕೆಲವು ಭ್ರಷ್ಟ ಅಧಿಕಾರಿಗಳಿಂದಾಗಿ ರಾತ್ರಿ 12 ಗಂಟೆ ನಂತರ ಈ ಮಾಫಿಯಾ ಕೆಲಸ ಆರಂಭಿಸುತ್ತಿದೆ. ಹಣ ಪಡೆದು ಸುಮಾರು 4500 ಬೆಡ್ ಗಳನ್ನು ಬುಕ್ ಮಾಡಲಾಗಿದೆ. ಇದರಿಂದ ಜನ ಸಾಮಾನ್ಯರಿಗೆ ಬೆಡ್ ಸಿಗುತ್ತಿಲ್ಲ ಎಂದರು.