ಬೆಳಗಾವಿ : ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ ಮಂಗಳವಾರ ಬೆಳಗಿನಜಾವ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಬೆಳಗಾವಿ ಜಿಲ್ಲೆಯ ಸಂಪಗಾಂವ ಬಳಿಯ ಸಾಣಿಕೊಪ್ಪದಲ್ಲಿ ಏಪ್ರಿಲ್ 6, 1936ರಲ್ಲಿ ಜನಿಸಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತ 4 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಅವರ ಅಂತ್ಯಕ್ರಿಯೆ ಸಾಣಿಕೊಪ್ಪದಲ್ಲಿ ಇಂದು ಸಂಜೆ 5 ಗಂಟೆಗೆ ನಡೆಯಲಿದೆ. ಉದ್ಯಮಿಗಳಾದ ಶಶಿಕಾಂತ ಸಿದ್ನಾಳ ಹಾಗೂ ಶಿವಕಾಂತ ಸಿದ್ನಾಳ ಎಸ್.ಬಿ.ಸಿದ್ನಾಳ ಅವರ ಪುತ್ರರಾಗಿದ್ದಾರೆ.