ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ಅಧಿಕಾರಿಗಳ ಕಿರುಕುಳ ತಾಳಲಾರದೇ ಸಾರಿಗೆ ನೌಕರ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ.
6ನೇ ವೇತನ ಆಯೋಗಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು, ಇದರಿಂದ ನೊಂದ ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕ ಶಿವಕುಮಾರ್ ನೀಲಗಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸವದತ್ತಿಯ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಶಿವಕುಮಾರ್ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಾಯುವ್ಯ ಸಾರಿಗೆ ಸಂಸ್ಥೆ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಶಿವಕುಮಾರ್ ನೇತೃತ್ವದಲ್ಲಿ ನೌಕರರು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡುವ ಯೋಜನೆ ಇತ್ತು.