ಬೆಂಗಳೂರು: ತಮಿಳರ ಚಿನ್ನಮ್ಮ, ದಿ. ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ, ವಿ.ಕೆ.ಶಶಿಕಲಾ ಅವರು ಜೈಲು ವಾಸ ಮುಗಿಸಿ ತವರಿಗೆ ಹೊರಟಿದ್ದಾರೆ. ಹಲವು ವರ್ಷಗಳಿಂದ ತವರಿನಿಂದ ದೂರವಿದ್ದ ಮಗಳನ್ನು ತಮಿಳಿಗರು ಅದ್ದೂರಿಯಾಗಿ ಸ್ವಾಗತಿಸುತ್ತಿದ್ದಾರೆ.
ಜೈಲಿನಿಂದ ಬಿಡುಗಡೆಯಾಗಿ ಕಳೆದೊಂದು ವಾರದಿಂದ ನಗರದ ಖಾಸಗಿ ಕ್ಲಬ್ ನಲ್ಲಿ ಕಾಲ ಕಳೆದಿದ್ದ ಶಶಿಕಲಾ, ಇಂದು ಬೆಳಗ್ಗೆ ತಮಿಳುನಾಡಿನತ್ತ ಹೊರಟಿದ್ದಾರೆ. ಅತ್ತಿಬೆಲೆ, ಹೊಸೂರು ಮಾರ್ಗವಾಗಿ ಶಶಿಕಲಾ ತಮಿಳುನಾಡಿಗೆ ಹೋಗಲಿದ್ದಾರೆ. ಮಾರ್ಗಮಧ್ಯೆ ಸಾವಿರಾರು ಮಂದಿ ಬೆಂಬಲಿಗರು ಸೇರಿದ್ದು, ಶಶಿಕಲಾ ಅವರನ್ನು ವೈಭವದಿಂದ ಸ್ವಾಗತಿಸಲು ಸಿದ್ದತೆ ನಡೆಸಿದ್ದಾರೆ.
ದೂರು: ವಿ.ಕೆ. ಶಶಿಕಲಾ ತಮಿಳುನಾಡಿ ನಾದ್ಯಂತ ಹಿಂಸೆ ನಡೆಸಲು ಸಂಚು ರೂಪಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಡಳಿತ ಪಕ್ಷ ಭಾನುವಾರ ಪೊಲೀಸರಿಗೆ ದೂರು ನೀಡಿದೆ.
ಏಪ್ರಿಲ್- ಮೇನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ದಿ.ಜಯಲಲಿತಾ ಆಪ್ತೆ ರಾಜಕೀಯವಾಗಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಅಂಶ ಇನ್ನೂ ಸ್ಪಷ್ಟವಾಗಿಲ್ಲ. ಎಐಎಡಿಎಂಕೆ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಅಮ್ಮಾ ಮಕ್ಕಳ್ ಮುನ್ನೇತ್ರ ಕಳಗಂ ಪಕ್ಷದ ಸಂಸ್ಥಾಪಕ, ಶಾಸಕ ಟಿ.ಟಿ.ವಿ.ದಿನಕರನ್, ಇದು ತೇಜೋವಧೆಯ ತಂತ್ರ ಎಂದಿದ್ದಾರೆ.