ಬೆಂಗಳೂರು : ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಹೋರಾಟಕ್ಕೆ ದೊಡ್ಡ ಜಯ ಸಿಕ್ಕಂತೆಯಾಗಿದ್ದು, ವರದಿ ಸಲ್ಲಿಸಲು ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಆಯೋಗಕ್ಕೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಲಿಂಗಾಯತ ಪಂಚಮಸಾಲಿ ಸಮಾಜವನ್ನು 2 ಎ ಮೀಸಲಾತಿ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಿದ್ದೇನೆ, ಈ ಬಗ್ಗೆ ವರದಿ ಸಲ್ಲಿಸಲು ಕೋರಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಅಧಿವೇಶನದಲ್ಲಿ ನನ್ನ ಹೇಳಿಕೆಯನ್ನು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಗಳು ಅಪಾರ್ಥ ಮಾಡಿಕೊಂಡಿದ್ದಾರೆ. ನಾನು ಇಂದಿನ ಅಧಿವೇಶನದಲ್ಲಿ ನಾನು ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದರಿಂದ ಎಲ್ಲಾ ಸಂಸತ್ ಸದಸ್ಯರ ಜೊತೆ ಚರ್ಚಿಸಿ ಮುಂದೆ ರಾಷ್ಟ್ರೀಯ ನಾಯಕರೊಂದಿಗೆ ಈ ವಿಷಯದ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ. ನಮ್ಮ ಸರ್ಕಾರ ಈ ಹಿಂದೆ ಪಂಚಮಸಾಲಿ ಸಮಾಜವನ್ನು 3 ಬಿ ಸೇರಿಸಿರುವುದನ್ನು ನೆನಪಿಸಿಕೊಳ್ಳಬಹುದು ಎಂದಿರುವೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿದರು.
ರಾಜ್ಯದ ಸಿಎಂ ಆಗಿ ಎಲ್ಲಾ ಸಮುದಾಯಗಳ ಒಳಿತಿಗೆ ಬದ್ದನಾಗಿರುತ್ತೇನೆ., ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.