ಭ್ರಷ್ಟಾಚಾರ ಅರೋಪ: ಮತ್ತೆ ಆರಂಭವಾದ ಇಸ್ರೇಲ್ ಪ್ರಧಾನಿ ವಿಚಾರಣೆ

ಇಸ್ರೇಲ್: ಇಸ್ರೇಲ್​ ಪ್ರಧಾನಿ ಬೆಂಜಮಿನ್​ ನೆತನ್ಯಾಹು ಅವರ ಮೇಲೆ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಈ ಸಂಬಂಧ ಬೆಂಜಮಿನ್ ನೆತನ್ಯಾಹು ಅವರ ವಿಚಾರಣೆ ಮತ್ತೆ ಆರಂಭವಾಗಿದೆ. ಕಳೆದ ಮಾರ್ಚ್​ನಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬೆಂಜಮಿನ್ ನೆತನ್ಯಾಹು ಅವರು ಸ್ಪಷ್ಟ ಬಹುಮತ ಗಳಿಸುವಲ್ಲಿ ವಿಫಲರಾಗಿದ್ದರು.

ಆದರೆ ಇಸ್ರೇಲ್​ ಪ್ರಧಾನಿ ತಮ್ಮ ಮೇಲೆ ಕೇಳಿ ಬಂದಿರುವ ಭ್ರಷ್ಟಾಚಾರ ಪ್ರಕರಣವನ್ನು ಅಲ್ಲಗಳೆದಿದ್ದಾರೆ. ಬೆಂಜಮಿನ್ ನೆತನ್ಯಾಹು ವಂಚನೆ ಮತ್ತು ಲಂಚ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ.

ಬೆಂಜಮಿನ್​ ನೆತನ್ಯಾಹು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ಎಸಗಿದ್ದರು ಎಂಬ ಆರೋಪವಿದೆ, ಹೀಗಾಗಿ ಅವರ ಮೇಲಿನ ವಿಚಾರಣೆಯನ್ನು ಮತ್ತೆ ಆರಂಭಿಸಲಾಗುತ್ತಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!